ಸೋಮವಾರ, ಮೇ 23, 2022
21 °C

ಕೆಬಿಜೆಎನ್‌ಎಲ್‌ನಲ್ಲಿ ಕಮಿಷನ್‌: ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭೀಮರಾಯನಗುಡಿ(ಶಹಾಪುರ): ಕೃಷ್ಣಾ ಭಾಗ್ಯ ಜಲ ನಿಗಮದ ನಾರಾಯಣಪುರ, ಆಲಮಟ್ಟಿ ವಲಯದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದು, ನಿಗಮದಲ್ಲಿ ಕೆಲ ನಿರ್ವಹಿಸುತ್ತಿರುವ ಎಂಜಿನಿಯರ್‌ಗಳಿಗೆ ಪರ್ಸೆಂಟೇಜ್ ನೀಡಬೇಕು ಎಂಬ ಅಲಿಖಿತ ಬೇಡಿಕೆಯನ್ನು ಮುಂದೆ ಇಟ್ಟು ಕಳಪೆ ಕಾಮಗಾರಿಗೆ ಪ್ರೇರಣೆ ನೀಡುತ್ತಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶನಿವಾರ ಭೀಮರಾಯನಗುಡಿ ಆಡಳಿತ ಕಚೇರಿ ಎದುರು ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದ ಸಂಚಾಲಕ ವೆಂಕೋಬ ದೊರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಲುವೆ ಜಾಲದ ದುರಸ್ತಿಗಾಗಿ ಟೆಂಡರ್ ಕರೆಯುವುದು ಸಾಮಾನ್ಯ. ಆಗ ಗುತ್ತಿಗೆದಾರರು ಅತ್ಯಂತ ಕಡಿಮೆ ಬೆಲೆಗೆ ಟೆಂಡರ್ ಪಡೆದು ಎಂಜಿನಿಯರ್ ಹಾಗೂ ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗುವುದು ಸಾಮಾನ್ಯವಾಗಿದೆ. ಪ್ರಸಕ್ತ ಬಾರಿ ಇದಕ್ಕೆ ಕಡಿವಾಣ ಹಾಕಬೇಕು. ಈಗಾಗಲೇ ಕೆಲವು ಕಡೆ ಹಳೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿವೆ. ಅದರ ಗುಣಮಟ್ಟ ಪರಿಶೀಲಿಸಬೇಕು. ಅಕ್ರಮ ಕಂಡು ಬಂದರೆ ಸೂಕ್ತ ತನಿಖೆ ನಡೆಸಬೇಕು ಎಂದು ಮುಖಂಡರು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು