ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ದಿನಗಳಲ್ಲಿ ಲಸಿಕಾಕರಣ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ರಾಗಪ್ರಿಯಾ ಸೂಚನೆ

Last Updated 1 ಡಿಸೆಂಬರ್ 2021, 4:49 IST
ಅಕ್ಷರ ಗಾತ್ರ

ಸುರಪುರ: ‘ಮನೆ ಮನೆಗೆ ತೆರಳಿ ಜನರ ಮನವೊಲಿಸಿ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಬೇಕು. ಇನ್ನೂ 15 ದಿನದಲ್ಲಿ ಉಳಿದ ಒಂದನೇ ಮತ್ತು ಎರಡನೇ ಡೋಸ್ ಲಸಿಕೆ ತೀವ್ರಗತಿಯಲ್ಲಿ ಹಾಕಿ ಪ್ರಗತಿ ಸಾಧಿಸಬೇಕು’ ಎಂದು ಜಿಲ್ಲಾಧಿಕಾರಿ ರಾಗಪ್ರಿಯಾ ಸೂಚಿಸಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೋವಿಡ್ ಲಸಿಕಾಕರಣ ಪ್ರಗತಿ ಸಭೆಯಲ್ಲಿ ಅವರು ಮಾತನಾಡಿದರು.

‘ಆಯಾ ಗ್ರಾಪಂ ಪಿಡಿಒ, ವೈದ್ಯಾಧಿಕಾರಿ, ಗ್ರಾಮ ಲೆಕ್ಕಾಧಿಕಾರಿಗಳು ಅಂಗನವಾಡಿ, ಆಶಾ ಕಾರ್ಯಕರ್ತೆಯರ ಜತೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮನೆ ಮನೆಗೆ ಹೋಗಿ ಲಸಿಕೆ ಹಾಕಬೇಕು. ಗ್ರಾಪಂ ಟಾಸ್ಕ್ ಪೋರ್ಸ್ ಮತ್ತು ಆಯಾ ಸಮುದಾಯಗಳ, ಧಾರ್ಮಿಕ ಮುಖಂಡರ ಸಹಾಯ ಪಡೆಯಬೇಕು. ನಿರ್ಲಕ್ಷ್ಯ ತೋರದೆ ಶೇ 100 ರಷ್ಟು ಸಾಧನೆ ಮಾಡಬೇಕು’ ಎಂದರು.

‘ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಡಿಮೆ ಲಸಿಕಾಕರಣವಾಗಿವೆ. ಲಸಿಕಾಕರಣದ ಬಗ್ಗೆ ಏನೆಲ್ಲಾ ಜಾಗೃತಿ ಮೂಡಿಸಿದ್ದೀರಿ, ಆಡಿಯೊ, ವಿಡಿಯೊ, ಬೀದಿ ನಾಟಕ ತೋರಿಸಿದ್ದೀರಾ, ಏನು ಸಮಸ್ಯೆಗಳು ಇವೆ, ಯಾಕೆ ಕಡಿಮೆಯಾಗಿದೆ’ ಎಂದು ಸಂಬಂಧಿಸಿದ ವೈದ್ಯಾಧಿಕಾರಿ, ಪಿಡಿಒ, ಗ್ರಾಮ ಲೆಕ್ಕಾಧಿಕಾರಗಳಿಗೆ ಪ್ರಶ್ನಿಸಿದರು.

ಲಸಿಕಾಕರಣದಲ್ಲಿ ನಿರೀಕ್ಷಿತ ಗುರಿ ಸಾಧಿಸದವರಿಗೆ ನೋಟಿಸ್ ನೀಡುವಂತೆ ಜಿಪಂ ಅಧಿಕಾರಿಗೆ ಸೂಚಿಸಿದ ಅವರು, ‘ಎಲ್ಲರೂ ಕೇಂದ್ರ ಸ್ಥಾನದಲ್ಲಿರಬೇಕು. ಕ್ಷೇತ್ರದಲ್ಲಿ ಅಭಿಯಾನ ಯಶಸ್ವಿಗೆ ತಹಸೀಲ್ದಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಹೆಚ್ಚಿನ ಜವಾಬ್ದಾರಿ ವಹಿಸಿ
ಶ್ರಮಿಸಬೇಕು’ ಎಂದರು.

‘ಸುರಪುರ ಮತ್ತು ಹುಣಸಗಿ ತಾಲ್ಲೂಕಿನಲ್ಲಿ ಮೊದಲ ಡೋಸ್ ಶೇ 87, ಎರಡನೇ ಡೋಸ್ ಶೇ 56 ರಷ್ಟು ಆಗಿದೆ. ಆದರೆ ಎರಡು ಡೋಸ್‍ಗಳು ನೂರರಷ್ಟು ಸಾಧನೆ ಮಾಡಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ಲಸಿಕಾಕರಣ ಚೆನ್ನಾಗಿದೆ.ಆದರೆ, ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ’ ಎಂದರು.

‘ಕಕ್ಕೇರಾ ದಲ್ಲಿ 10 ತಂಡಗಳನ್ನು ಕಳುಹಿಸಿಕೊಳಡಲಾಗುವುದು. ಲಸಿಕಾಕರಣದ ಸಮಯದಲ್ಲಿ ಹೆಚ್ಚಿನ ಪೊಲೀಸ್ ವ್ಯವಸ್ಥೆ ಕಲ್ಪಿಸುವಂತೆ ಜಿ್ಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಲಾಗುವುದು’ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ, ತಾಲ್ಲೂಕು ಆರೋಗ್ಯಾಧಕಾರಿ ಡಾ.ರಾಜಾ ವೆಂಕಪ್ಪನಾಯಕ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್ ಮಾಹಿತಿ ನೀಡಿದರು.

ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ನಾಗರಾಜ ಪಾಟೀಲ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸುರಪುರ-ಹುಣಸಗಿ ತಾಪಂ ಇಒಗಳು, ಎಲ್ಲ ಗ್ರಾಪಂ ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT