ಸೋಮವಾರ, ಜೂನ್ 27, 2022
21 °C
ಮದುವೆ ಸಮಾರಂಭ ನಿಷೇಧ,ದಿನಸಿ, ಮದ್ಯ ಮಾರಾಟ ಇಲ್ಲ: ಡಿಸಿ ಡಾ. ರಾಗಪ್ರಿಯಾ

ಯಾದಗಿರಿ ಜಿಲ್ಲೆಯಲ್ಲಿ ಜೂನ್‌ 5ರಿಂದ ಸಂಪೂರ್ಣ ಲಾಕ್‍ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಲ್ಲಿ ಜೂನ್‌ 5ರಿಂದ 9 ರ ಬೆಳಿಗ್ಗೆ 6ರ ವರೆಗೆ ಜಿಲ್ಲೆ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ತಿಳಿಸಿದ್ದಾರೆ.

ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಆಂಬುಲೆನ್ಸ್, ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ನೀರು, ನೈರ್ಮಲ್ಯ, ದಿನಪತ್ರಿಕೆ, ಎಟಿಎಂ ಸೇವೆಗಳಿಗೆ ಮಾತ್ರ ಅನುಮತಿಸಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ಜಿಲ್ಲೆಯಲ್ಲಿನ ಎಲ್ಲಾ ಬ್ಯಾಂಕ್ ಶಾಖೆಗಳು/ ಬ್ಯಾಂಕ್ ಆಡಳಿತ ಕಚೇರಿಗಳು ಮತ್ತು ಅಂಚೆ ಸೇವೆಗಳು ಕೋವಿಡ್ 19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವ ಷರತ್ತಿಗೆ ಒಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಿದೆ.

ಜಿಲ್ಲೆಯಾದ್ಯಂತ ಜೂನ್‌ 9ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯಮಾರಾಟ, ಮದುವೆ ಸಮಾರಂಭಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ನಾಗರಿಕ ರಕ್ಷಣೆ, ವಿದ್ಯುತ್ ಸರಬರಾಜು ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆ, ವಿಪತ್ತು ನಿರ್ವಹಣೆ, ಕಾರಾಗೃಹ ಸೇವೆ, ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ.

ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ.

ಜಿಲ್ಲೆಯಾದ್ಯಂತ ಶುಕ್ರವಾರ ಅನಾವಶ್ಯಕವಾಗಿ ತಿರುಗಾಡುತ್ತಿದ್ದ 39 ದ್ವಿಚಕ್ರ, 2 ನಾಲ್ಕು ಚಕ್ರ ವಾಹನಗಳನ್ನು ಜಪ್ತಿಮಾಡಿಕೊಳ್ಳಲಾಗಿದೆ. ಮಾಸ್ಕ್ ಹಾಕದೆ ಇರುವವರ ಮೇಲೆ 337-ಪ್ರಕರಣ ಹಾಗೂ 33,700 ದಂಡ ವಿಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು