ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗಳ ಜಿಪಿಎಸ್ ಪ್ರಕ್ರಿಯೆ ಪೂರ್ಣಗೊಳಿಸಿ: ಡಾ.ರಾಗಪ್ರಿಯಾ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Last Updated 19 ಜನವರಿ 2021, 2:31 IST
ಅಕ್ಷರ ಗಾತ್ರ

ಯಾದಗಿರಿ: ‘ಕಳೆದ ವರ್ಷ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದ ಹಾನಿಯಾದ ಮನೆಗಳ ಜಿಪಿಎಸ್ ಪ್ರಕ್ರಿಯೆ ಶೀಘ್ರ ಮುಗಿಸುವಂತೆ’ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಸಂಬಂಧಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸಕಾಲ ಹಾಗೂ ಭೂಮಿ, ವಕ್ಫ್‌, ಎಜೆಎನ್‌ಕೆ ಪ್ರಗತಿ ಮತ್ತು ಪ್ರವಾಹದಿಂದ ಹಾನಿಯಾದ ಮನೆಗಳ ಜಿಪಿಎಸ್ ಅಪ್‍ಲೋಡ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ ಜಿಪಿಎಸ್ ಪ್ರಕ್ರಿಯೆ ವಿಳಂಬ ಮಾಡದೆ ಶೀಘ್ರವೇ ಖಾತ್ರಿ ಮಾಡಿ ವರದಿ ನೀಡಬೇಕೆಂದು ಜಿಲ್ಲೆಯ ಯಾದಗಿರಿ, ಗುರುಮಠಕಲ್, ಸುರಪುರ, ಶಹಾಪುರ, ವಡಗೇರಾ, ಹುಣಸಗಿ ತಹಶೀಲ್ದಾರರಿಗೆ’ ಜಿಲ್ಲಾಧಿಕಾರಿ ಸೂಚಿಸಿದರು.

‘ಜೆಸ್ಕಾಂ, ತೋಟಗಾರಿಕೆ ಸೇರಿದಂತೆ ಇತರೆ ಇಲಾಖೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣೆಯಿಂದ ಬಂದಂಥ ಪರಿಹಾರವನ್ನು ಪ್ರವಾಹದಿಂದ ನೊಂದವರಿಗೆ ನೇರವಾಗಿ ತಲುಪುವಂತೆ ಮಾಡುವಂತೆ ಅಧಿಕಾರಿಗಳಿಗೆ’ ಹೇಳಿದರು.

‘ಮಾತೃ ವಂದನಾ ಯೋಜನಾ ಅಡಿಯಲ್ಲಿ ಉತ್ತಮ ಪ್ರಗತಿ ಸಾಧಿಸಿ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಲಭಿಸುವಂತೆ ಕಾರ್ಯನಿರ್ವಹಿಸಿದ ಅಧಿಕಾರಿಗಳ ಕಾರ್ಯ ಶ್ಲಾಘಿಸಿದರು. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಮೂರು ಕಂತಿನಲ್ಲಿ ಹಣವನ್ನು ನೀಡಲಾಗುತ್ತಿದ್ದು, ಇದರ ಲಾಭ ಜನರಿಗೆ ತಲುಪುವಂತಗಾಲಿ’ ಎಂದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಗುರುಮಠಕಲ್ ತಹಶೀಲ್ದಾರ್ ಸಂಗಮೇಶ ಜಿಡಗಿ, ಶಹಾಪುರ ತಹಶೀಲ್ದಾರ್ ಮಹಿಬೂಬಿ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT