ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಖಂಡನೆ

ಎಐಡಿಎಸ್‍ಒ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪ್ರತಿಭಟನೆ
Last Updated 17 ಡಿಸೆಂಬರ್ 2019, 15:19 IST
ಅಕ್ಷರ ಗಾತ್ರ

ಯಾದಗಿರಿ: ಪ್ರತಿಭಟನಾನಿರತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹಾಗೂ ಅಲಿಘರ್ ಮುಸ್ಲಿಂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದಾಳಿ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಇಲ್ಲಿನ ನಗರಸಭೆ ಹತ್ತಿರ ಪ್ರತಿಭಟನೆ ನಡೆಸಿದರು.

ಎಐಡಿಎಸ್‍ಒ ರಾಜ್ಯ ಖಜಾಂಚಿ ಅಭಯಾ ದಿವಾಕರ್ಮಾತನಾಡಿ, ‘ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿ.ವಿ ವಿದ್ಯಾರ್ಥಿಗಳು ಮುಂಚಿತವಾಗಿ ತಿಳಿಸಿಯೇ ಹಿಂಸೆಗೆ ಆಸ್ಪದವಿಲ್ಲದಂತೆ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದರೆ, ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು ಹೇಯ ಕೃತ್ಯವಾಗಿದೆ’ ಎಂದು ದೂರಿದರು.

‘ದಾಳಿಯಿಂದ ವಿದ್ಯಾರ್ಥಿಗಳು ಗಾಯಗೊಂಡು, ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ದೇಶದ ವಿದ್ಯಾರ್ಥಿ ಚಳವಳಿಯ ಇತಿಹಾಸದಲ್ಲಿ ಈ ಘಟನೆ ಕರಾಳ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಐಡಿಎಸ್‍ಒ ಜಿಲ್ಲಾಧ್ಯಕ್ಷ ಸೈದಪ್ಪ ಎಚ್.ಪಿ., ಮಾತನಾಡಿ, ‘ದೇಶವ್ಯಾಪಿ ವಿರೋಧ ವ್ಯಕ್ತವಾಗುತ್ತಿರುವ ಕೋಮು, ಪಕ್ಷಪಾತ ಆಧಾರಿತ ನಾಗರಿಕತ್ವ (ತಿದ್ದುಪಡಿ) ಮಸೂದೆ ವಿರೋಧಿಸಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿ ಸಮುದಾಯದ ಮೇಲೆ ಹಲ್ಲೆ ನಡೆಸಿದ್ದು, ಸರ್ಕಾರದ ವಿಫಲ ಯತ್ನವಾಗಿದೆ. ಪ್ರಜಾತಾಂತ್ರಿಕ ಹಕ್ಕನ್ನು ಎತ್ತಿಹಿಡಿಯುವ ವಿದ್ಯಾರ್ಥಿಗಳ ಮೇಲಿನ ದಾಳಿಗಳನ್ನು ನಿಲ್ಲಿಸಬೇಕು. ಹಿಂಸಾಚಾರದ ಹಿಂದಿರುವ ಘಾತುಕ ಶಕ್ತಿಗಳನ್ನು ಪತ್ತೆ ಹಚ್ಚಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಸುಭಾಶ್ಚಂದ್ರ, ಸಹ ಕಾರ್ಯದರ್ಶಿ ಕೆ.ಎಸ್‌.ಚೇತನಾ, ಜಿಲ್ಲಾ ಉಪಾಧ್ಯಕ್ಷೆ ಸಿಂಧು ಬಿ., ಶಿವರಾಜ, ಪ್ರದೀಪಕುಮಾರ, ಮಲ್ಲಿಕಾರ್ಜುನ, ಸಲೀಂ, ಸುರೇಶ, ಅಮೀತ್, ಉಮಾರೆಡ್ಡಿ, ಮೌನೇಶ, ಬಾಷಾ, ಸಾಬರೆಡ್ಡಿ, ಸಾಬಯ್ಯ, ಭಾಗ್ಯ, ರೇಣುಕಾ, ಸಿದ್ದಮ್ಮ, ಶಿಲ್ಪಾ, ಅರ್ಚನಾ, ಶ್ವೇತಾ, ವಿದ್ಯಾರಾಣಿ, ವಿಜಯಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT