ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Published 19 ಮಾರ್ಚ್ 2024, 15:20 IST
Last Updated 19 ಮಾರ್ಚ್ 2024, 15:20 IST
ಅಕ್ಷರ ಗಾತ್ರ

ಹುಣಸಗಿ: ‘ಬಿಜೆಪಿಯ ಪ್ರತಿ ಕಾರ್ಯಕರ್ತನೂ ಬೂತ್ ಮಟ್ಟದಲ್ಲಿ ಕೆಲಸ ಮಾಡಿದಾಗ ಮಾತ್ರ ಈ ಚುನಾವಣೆಯಲ್ಲಿ ಜಯಗಳಿಸಲು ಸಾಧ್ಯ’ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾದ್ಯಕ್ಷ ರಾಜೂಗೌಡ ಹೇಳಿದರು.

ಪಟ್ಟಣದಲ್ಲಿ ಕಾಂಗ್ರೆಸ್ ಪ್ರಮುಖ ಮಡಿವಾಳಪ್ಪ ಕಟ್ಟಿಮನಿ ಹಾಗೂ ಇತರರನ್ನು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದ ಅಭಿವೃದ್ಧಿಗಾಗಿ ಹಗಲಿರುಳು ಕೆಲಸ ಮಾಡುತ್ತಿರುವ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿ ಮಾಡುವದು ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲರೂ ಒಟ್ಟಾಗಿ ಕೆಲಸ‌ಮಾಡಬೇಕು’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಬೆಳೆ ಹಾನಿಯಾದರೆ ತಕ್ಷಣವೆ ಐವತ್ತು ಸಾವಿರದಷ್ಟು ಪರಿಹಾರ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಒಬ್ಬ ರೈತರ ನೆರವಿಗೆ ಬಂದಿಲ್ಲ. ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಕೆಲಸ ಸಂಪೂರ್ಣ ಸ್ಥಗಿತವಾಗಿದೆ’ ಎಂದರು.

ಮಡಿವಾಳಪ್ಪ ಕಟ್ಟಿಮನಿ(ಮೀಲ್ಟ್ರಿ) ಮಾತನಾಡಿ, ‘ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಬೆಲೆ ಇಲ್ಲ. ಇದರಿಂದ ಭಗೀರಥ ಸಮಾಜದ ಕಾರ್ಯಕರ್ತರೊಂದಿಗೆ ಬಿಜೆಪಿ ಪಕ್ಷಕ್ಕೆ ಸೆರ್ಪಡೆಯಾಗಿದ್ದೇವೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ,ವಿರೇಶ ಚಿಂಚೋಳಿ,ಬಸವರಾಜ ಸ್ಥಾವರಮಠ,ಗುರಲಿಂಗಪ್ಪ ಸಜ್ಜನ್, ಸುರೇಶ ದೊರಿ,ಬಸಣ್ಣ ದೇಸಾಯಿ ಸೋಮಶೇಖರ ಸ್ಥಾವರಮಠ, ಎಂ.ಎಸ್.ಚಂದಾ,ಮೇಲಪ್ಪ ಗುಳಗಿ, ಭೀಮಣ್ಣ ಕಟ್ಟಿಮನಿ, ಮಲ್ಲು ಹೆಬ್ಬಾಳ, ಸಿದ್ದನಗೌಡ ಕರಿಭಾವಿ,ಬಸಣ್ಣ ಬಾಲಗೌಡ್ರ,ನಂದಪ್ಪ ಪೀರಾಪೂರ,ಪರಮಾನಂದ ಚೆಟ್ಟಿ ಸೇರಿದಂತೆ ಇತರರು ಉಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT