ಯಾದಗಿರಿ: ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಇಬ್ಬರು ಆರೋಪಿಗಳು ಪೆಟ್ರೋಲ್ ಸುರಿದು ಶನಿವಾರ ಬೆಳಗಿನ ಜಾವ ಬೆಂಕಿ ಹಚ್ಚಿದ್ದು, ಹವಾನಿಯಂತ್ರಣ ಉಪಕರಣ, ಸೋಫಾ ಮತ್ತು ಕುರ್ಚಿಗಳು ಸುಟ್ಟು ಹೋಗಿವೆ.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಮಂಜುಳಾ ಗೂಳಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಅವರ ಸ್ಥಾನಕ್ಕೆ ಬೇರೋಬ್ಬರ ನೇಮಿಸಿದ್ದರಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಿದೆ.

ಶಂಕರ ಗೂಳಿ ಎಂಬುವವನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬರಿಗಾಗಿ ಹುಡುಕಾಟ ನಡೆಸಲಾಗಿದೆ. ಕಾಂಗ್ರೆಸ್ ಕಚೇರಿ ಎದುರಿಗಿನ ಅಂಗಡಿಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಶನಿವಾರ ಬೆಳಗಿನ ಜಾವ 1. 30ರ ಸುಮಾರಿಗೆ ಇಬ್ಬರು ಬಳಿ ಬಣ್ಣ ಬೈಕ್ ಮೇಲೆ ಕಚೇರಿಗೆ ಬಂದು ಕಿಟಕಿ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದು ಕಂಡು ಬಂದ ಹಿನ್ನಲೆಯಲ್ಲಿ ಜಾಲ ಬೀಸಿ ಬಂಧಿಸಲಾಗಿದೆ.

ಪ್ರಾಣ ಹಾನಿ ಸಂಭವಿಸಿಲ್ಲ. ಕಟ್ಟಡದ ಆವರಣದ ಟೇಬಲ್ ಮೇಲೆ 20 ಲೀಟರ್ ಕ್ಯಾನ್ ಇದ್ದು, ಇದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸಿಬ್ಬಂದಿ ಶನಿವಾರ ಕಚೇರಿ ತೆರೆದಾಗ ಕೃತ್ಯ ಗೊತ್ತಾಗಿದೆ. ಪಕ್ಷದ ಪದಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ₹4 ಲಕ್ಷದಿಂದ ₹5 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟಿವೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಬೇಕು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಸರೆಡ್ಡಿ ಅನಪುರ ನಗರ ಠಾಣೆಗೆ ದೂರು ನೀಡಿದ್ದರು.

ಶಾಸಕ ಚನ್ನಾರೆಡ್ಡಿ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ, ಪ್ರಧಾನ ಕಾರ್ಯದರ್ಶಿ ಬಸುಗೌಡ ಬಿಳ್ಹಾರ ಕಚೇರಿಗೆ ಬಂದು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.