ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Last Updated 4 ಸೆಪ್ಟೆಂಬರ್ 2019, 15:25 IST
ಅಕ್ಷರ ಗಾತ್ರ

ಯಾದಗಿರಿ: ಕಾಂಗ್ರೆಸ್‌ ಪಕ್ಷದ ಮುಖಂಡ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಕೇಂದ್ರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ನಗರದ ಸುಭಾಷ್‌ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ ಮಾತನಾಡಿ, ‘ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್‌ ಪಕ್ಷದ ಮುಖಂಡರನ್ನು ಬಂಧಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ – ಜೆಡಿಎಸ್ ಶಾಸಕರಿಗೆ ಹಣ ಮತ್ತು ಅಧಿಕಾರದ ಆಸೆ ತೋರಿಸಿ ಅಧಿಕಾರಕ್ಕೆ ಬಂದಿದೆ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಬಿಜೆಪಿ ಹಾಳು ಮಾಡುತ್ತಿದೆ. ಕೂಡಲೇ ಡಿ.ಕೆ.ಶಿವಕುಮಾರ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್‌ ಅದ್ಯಕ್ಷ ಮರಿಗೌಡ ಪಾಟೀಲ ಹುಲಕಲ್ ಮಾತನಾಡಿ ‘ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಶಕ್ತಿ ಕುಂದಿಸಲು ಡಿ.ಕೆ.ಶಿವಕುಮಾರ ಅವರನ್ನು ಕೇಂದ್ರ ಸರ್ಕಾರ ಕುತಂತ್ರದಿಂದ ಬಂಧನ ಮಾಡಿಸಿದೆ. ಬರುವ ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಜನರೆ ಸೂಕ್ತ ಉತ್ತರ ಕೊಡಲಿದ್ದಾರೆ’ ಎಂದರು.

ಪಕ್ಷದ ಮುಖಂಡರಾದ ಶ್ರೀನಿವಾಸರೆಡ್ಡಿ ಕಂದಕೂರ, ಚಿದಾನಂದಪ್ಪ ಕಾಳೆಬೆಳಗುಂದಿ, ರಾಜಾ ವೇಣುಗೋಪಾಲ್ ನಾಯಕ್, ಲಾಯಕ್‌ ಹುಸೇನ್‌ ಬಾದಲ್, ಸುದರ್ಶನ್ ನಾಯಕ, ಭೀಮರಾಯ ಠಾಣಗುಂದಿ, ಚನ್ನಕೇಶವ ಬಾಣತಿಹಾಳ, ಮಾಣಿಕರೆಡ್ಡಿ ಕುರಕುಂದಿ, ಮಂಜುಳಾ ಗೂಳಿ, ವೆಂಕಟರೆಡ್ಡಿ ವನಕೇರಿ, ರಾಘವೇಂದ್ರ ಮಾನಸಗಲ್, ಮಹ್ಮದ್ ಜಿಲಾನಿ, ಬಸವರಾಜ ಬಾಚವಾರ, ಸಂಜಯ ಕಾವಲಿ, ಅಬ್ದುಲ್ ರಜಾಕ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT