ಯಾದಗಿರಿ: ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಶಹಾಪುರ, ಸುರಪುರ ಮತಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.
ಶಹಾಪುರದ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೆಸರು ಇದೆ.
ಎರಡು ಕ್ಷೇತ್ರಗಳಲ್ಲಿ ಹಾಲಿ, ಮಾಜಿ ಶಾಸಕರು ತಲಾ ಒಬ್ಬೊಬ್ಬರು ಮಾತ್ರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಇದರಿಂದ ಇದು ನಿರೀಕ್ಷಿತವೂ
ಆಗಿತ್ತು.
ಯಾದಗಿರಿ, ಗುರುಮಠಕಲ್‌ಗೆ ಘೋಷಿಸಿಲ್ಲ: ಜಿಲ್ಲೆಯಲ್ಲಿ ನಾಲ್ಕು ಮತಕ್ಷೇತ್ರಗಳಿವೆ. ಇದರಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಎರಡು ಮತಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಣೆ ಮಾಡಲಾಗಿದೆ. ಯಾದಗಿರಿ ಮತಕ್ಷೇತ್ರದಲ್ಲಿ 18 ಜನ, ಗುರುಮಠಕಲ್ ಮತಕ್ಷೇತ್ರದಲ್ಲಿ 8 ಜನ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ.
ಇನ್ನುಳಿದ ಎರಡು ಮತಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದರಿಂದ ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ.
ಈಚೆಗೆ ಮಾಜಿ ಸಚಿವ ಬಾಬುರಾವ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರಿಂದಲೂ ಟಿಕೆಟ್ ಘೋಷಣೆಗೆ ತೊಡಕು ಆಗಬಾರದು ಎಂದು ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿ ಉಳಿದ ಕ್ಷೇತ್ರಗಳಲ್ಲಿ ಕಾದು ನೋಡುವ ತಂತ್ರಕ್ಕೆ ಮೊರೆ
ಹೋಗಿದ್ದಾರೆ.
ಈಗಾಗಲೇ ವಿವಿಧ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಪ್ರಚಾರ ಆರಂಭಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.