ಯಾದಗಿರಿ: ‘ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ದಿವಂಗತ ಬಿ.ನಾರಾಯಣರಾವ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು’ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನಗೇರಾ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದ್ದಾರೆ.

‘ತೆರವಾದ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಎರಡು ಹೆಸರುಗಳನ್ನು ಬೆಂಗಳೂರಿನಿಂದ ದೆಹಲಿಗೆ ಶಿಫಾರಸು ಮಾಡಲಾಗಿದೆ. ಇದರಲ್ಲಿ ಬಿ.ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್ ನೀಡಬೇಕು’ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಹೆಸರು ಕಳಿಸಲಾಗಿದೆ. ಇದರಲ್ಲಿ ಮಲ್ಲಮ್ಮ ಅವರ ಹೆಸರು ಅಂತಿಮಗೊಳಿಸಬೇಕು. ಬೀದರ್ ಜಿಲ್ಲೆಯಲ್ಲಿ 35 ಸಾವಿರ ಕೋಲಿ, ಕಬ್ಬಲಿಗ ಸಮಾಜದವರಿದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಟಿಕೆಟ್ ನೀಡುವುದರ ಜೊತೆಗೆ ಗೆಲ್ಲಿಸಲು ಮುಖಂಡರು ಶ್ರಮ ಪಡಬೇಕು’ ಎಂದರು.

ಸುದ್ದಿಗೋಷ್ಠಿಯಲ್ಲಿ ಕೋಲಿ, ಕಬ್ಬಲಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಮಡ್ಡಿ, ಸಂಘದ ಗೌರಾವಾಧ್ಯಕ್ಷ ಸಿ.ಎಂ.ಪಟ್ಟೇದಾರ, ನಾಗರತ್ನ ಅನಪುರ, ಹಣಮಂತ ಬಳಿಚಕ್ರ, ಸಾಯಿಬಣ್ಣ, ಬಸವರಾಜ ಬಾಗ್ಲಿ, ದೇವೆಂದ್ರಪ್ಪ ಬೆಸ್ತ, ಭೀಮರೆಡ್ಡಿ ಯರಗೋಳ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.