ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Published 2 ಮಾರ್ಚ್ 2024, 15:22 IST
Last Updated 2 ಮಾರ್ಚ್ 2024, 15:22 IST
ಅಕ್ಷರ ಗಾತ್ರ

ಯಾದಗಿರಿ: ಸಂವಿಧಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಹೋದರೆ ಸಮಾಜ, ನಾಗರಿಕರ ಬೆಳವಣಿಗೆ ಸಾಧ್ಯವಿಲ್ಲ. ಆ ಕಾರಣದಿಂದ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಡಾ.ಬಿ‌.ಆರ್.ಅಂಬೇಡ್ಕರ್ ಹಾಕಿಕೊಟ್ಟ ದಾರಿಯಲ್ಲಿ ಸಾಗಲು ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ದೇವಿಂದ್ರಪ್ಪ ಕಟ್ಟಿಮನಿ ಹೇಳಿದರು.

ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ರಥಯಾತ್ರೆಯನ್ನು ಊರಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಜಗದೀಶಪ್ಪಗೌಡ ಮಾತನಾಡಿ, ಶೋಷಿತ ವರ್ಗಗಳು ಮುಂದೆ ಬರಲು, ಸಮಾಜ ಕಟ್ಟ ಕಡೆಯ ವ್ಯಕ್ತಿಗಳು ಸಮಾನತೆಯಿಂದ ಬಾಳಲು ಅವಕಾಶ ನೀಡಿದ್ದು ಸಂವಿಧಾನ. ಈ ಸಂವಿಧಾನವನ್ನು ಅರಿತು ಅದರ ಬಗ್ಗೆ ಜ್ಞಾನ ಪಡೆದು ಇನ್ನಿತರರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ್, ಪ್ರೌಢಶಾಲೆ ವಿದ್ಯಾರ್ಥಿಗಳಾದ ಬಂಗಾರೆಮ್ಮ ಹಾಗೂ ಮಂಗಳಾದೇವಿ ಸಂವಿಧಾನ ರಚನೆ, ಕಾಯ್ದೆಗಳ ಕುರಿತು ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೌಲಾಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆನಂದಮ್ಮ ಮಲ್ಲಿಕಾರ್ಜುನ, ಉಪಾಧ್ಯಕ್ಷ ಆನಂದಪ್ಪ ಆಶನಾಳ, ಗ್ರಾಮ ಪಂಚಾಯಿತಿ ಸದಸ್ಯರು, ಪ್ರೌಢ, ಪ್ರಾಥಮಿಕ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು ಭಾಗವಹಿಸಿದ್ದರು. ಶಿಕ್ಷಕ ಮಲ್ಲಿಕಾರ್ಜುನ ನಿರೂಪಿಸಿದರು. ಮಲ್ಲಿಕಾರ್ಜುನ್ ಜಲ್ಲಪ್ಪನೋರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT