ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿ ಸ್ಮರಣೆ

ನಗರದ ವಿವಿಧೆಡೆ ಅಂಬೇಡ್ಕರ್‌ ಜಯಂತಿ: ಭಾವಚಿತ್ರಕ್ಕೆ ನಮನ
Last Updated 14 ಏಪ್ರಿಲ್ 2020, 15:42 IST
ಅಕ್ಷರ ಗಾತ್ರ

ಯಾದಗಿರಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರಳವಾಗಿ ಆಚರಣೆ ಮಾಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಜ್ಯೋತಿ ಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು,‘ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕಾರಣ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಹೆಚ್ಚಿನ ಜನಸಂದಣಿ ಇಲ್ಲದಂತೆ ಸರಳವಾಗಿ ಆಚರಿಸಲಾಗಿದೆ’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಚನ್ನಬಸವ, ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಈಟೆ, ನಿಂಗಣ್ಣ ವಡ್ನಳ್ಳಿ, ಮಹೇಶ್ ಕುರಕುಂದಿ ಹಾಗೂ ಮರೆಪ್ಪ ಚಟ್ಟೆರಕರ್ ಇದ್ದರು.

ಶಾಸಕರ ಕಚೇರಿ: ವಿಶ್ವಕ್ಕೆ ಮಾದರಿಯಾಗುವಂಥ ಪ್ರಜಾಪ್ರಭುತ್ವದ ತಳಹದಿಯ ಸಂವಿಧಾನವನ್ನು ಡಾ.ಬಾಬಾ ಸಾಹೇಬರು ನೀಡಿದ್ದಾರೆ. ಸಂವಿಧಾನದ ಆಶಯದಂತೆ ಹಕ್ಕುಗಳ ಮತ್ತು ಕರ್ತವ್ಯಗಳ ನಿರ್ವಹಣೆ ನಮ್ಮೆಲರ ಕರ್ತವ್ಯ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ನಗರದ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್‌ ಅವರ 129ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಮಾಡಿ ಮಾತನಾಡಿದ ಅವರು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು. ಸ್ವಾತಂತ್ರ್ಯ, ಸಮಾನತೆ ಪರಿಕಲ್ಪನೆ ಬಳಕೆಗೆ ಬರಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂದೇಶಗಳು ಕಾರಣವಾಗಿವೆ. ಆದ್ದರಿಂದ ಪ್ರತಿಯೊಬ್ಬರು ಕೂಡ ಅಂಬೇಡ್ಕರ್ ಅವರು ತೋರಿದ ಹಾದಿಯನ್ನು ಹಾಗೂ ಅವರ ಆದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಖಂಡಪ್ಪದಾಸನ್‌, ಮಾರುತಿ ಕಲಾಲ್, ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಪರಶುರಾಮ ಕುರಕುಂದಿ ಹಾಗೂ ಸುನೀತಾ ಚವ್ಹಾಣ ಇದ್ದರು.

ಜಿಲ್ಲಾ ಬಿಜೆಪಿ ಕಾರ್ಯಾಲಯ: ಯಾದಗಿರಿ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯನ್ನು ಪಕ್ಷದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜಯಂತಿ ಆಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅವರು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ಅಡಿಯಲ್ಲಿ ದಲಿತರು, ಹಿಂದುಳಿದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಅಡಿಯಲ್ಲಿ ಸೌಲಭ್ಯ ಕೊಡಿಸುವಲ್ಲಿ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ನುಡಿದರು.

ಮುಖಂಡರಾದ ವೆಂಕಟರಡ್ಡಿ ಅಬ್ಬೆತುಮಕೂರ, ಎಸ್.ಪಿ.ನಾಡೇಕರ್, ಮಲ್ಲು ಚಾಪಲ್, ಕಚೇರಿ ಕಾರ್ಯದರ್ಶಿ ಚಂದ್ರಶೇಖರ ಕಡೇಚೂರ ಹಾಗೂ ಸೂಗರೇಶ ಮಾಲಿಪಾಟೀಲ ಇದ್ದರು.

ಆಹಾರ ಧಾನ್ಯ ವಿತರಣೆ: ಡಾ. ಬಿ.ಆರ್‌.ಅಂಬೇಡ್ಕರ್ ಜಯಂತಿ ಅಂಗವಾಗಿ ಯಾದಗಿರಿಯ ವಾರ್ಡ್ ನಂ 9 ರಲ್ಲಿ ನಗರಸಭೆ ಸದಸ್ಯೆ ಪ್ರಭಾವತಿ ಮಾರುತಿ ಕಲಾಲ್ ಅವರು ತಮ್ಮ ಸ್ವತಂ ಖರ್ಚಿನಲ್ಲಿ ವಾರ್ಡ್‌ನಲ್ಲಿ 110 ಕುಟುಂಬಗಳಿಗೆ ದಿನ ಬಳಕೆಯ ಆಹಾರ ಪದಾರ್ಥಗಳ ವಿತರಣೆಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಖಂಡಪ್ಪ ದಾಸನ್, ಶಂಕರ್ ಗೋಶಿ, ಶರಣಪ್ಪ ಪಡಿಶೆಟ್ಟಿ, ಮಹೇಶ್ ಕೋರಿ, ಮಹಾದೇವಪ್ಪ ಗಣಪುರ, ವಿಲಾಸ್ ಪಾಟೀಲ, ಸುನಿತಾ ಕಾಶಿನಾಥ್, ನೀಡಜಿಂತಿ, ಮಲ್ಲಯ್ಯ, ನೀಲಕಂಠ ಗುತ್ತೆದಾರ್ ಇದ್ದರು.

ಕರವೇ ಕಾರ್ಯಾಲಯ: ನಗರದ ಕರವೇ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜಯಂತಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ನೇತೃತ್ವದಲ್ಲಿ ಆಚರಿಸಲಾಯಿತು.

ಯಡ್ಡಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ: ಯಾದಗಿರಿ ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 129ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಬಂದಳ್ಳಿ ಗ್ರಾಮ ಪಂಚಾಯಿತ ಅಧ್ಯಕ್ಷೆ ಅನುರಾಧ ವೀರಭದ್ರಪ್ಪ ಯಡ್ಡಳ್ಳಿ ಮಾಲಾರ್ಪಣೆ ಮಾಡುವುದರ ಮೂಲಕ ಆಚರಿಸಿದರು. ಈ ವೇಳೆ ಮುಖಂಡರಾದ ಎಸ್,ಸಿ ಕೊನಿನ್, ಬಂದಪ್ಪ ಕೆ,ಬೆಳಗೇರಾ, ಹೊನ್ನಪ್ಪ ನಾಟೇಕಾರ್, ಹಣಮಂತ ಬಂದಳ್ಳಿಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT