ಶುಕ್ರವಾರ, ಮೇ 14, 2021
30 °C
ಕೇಂದ್ರ ಬಿಜೆಪಿ ಸರ್ಕಾರದ ಕ್ರಮಕ್ಕೆ ಸೋಮಶೇಖರ ಖಂಡನೆ

‘ಕೋವಿಡ್ ವಾರಿಯರ್ಸ್‌ಗೆ ವಿಮಾ ಕವಚ ಮುಂದುವರಿಸಿ’

ಪ್ರಜಾವಾಣ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕೊರೊನಾ ವಾರಿಯರ್ಸ್‌ಗಳಿಗೆ ಈ ಹಿಂದೆ ಇದ್ದ ₹50 ಲಕ್ಷ ವಿಮಾ ಕವಚವನ್ನು ಅಂತ್ಯಗೊಳಿಸಿರುವುದಾಗಿ ಪ್ರಕಟಣೆ ಹೊರಡಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಅವರು, ಕೊರೊನಾ ಎರಡನೇ ಅಲೆ ತೀವ್ರ ಸ್ಪರೂಪದ್ದಾಗಿದ್ದು, ಅಧಿಕ ಸಾವುಗಳಿಗೆ ಕಾರಣವಾಗುತ್ತಿದೆ. ಇಂಥ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಇವರಿಗೆ ಕೇಂದ್ರ ಸರ್ಕಾರ ಈಗ ಆಘಾತ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಜೀವ ಉಳಿಸಲು ತಮ್ಮ ಜೀವ ಪಣಕ್ಕಿಟ್ಟ ಆರೋಗ್ಯ ಕಾರ್ಯಕರ್ತರು ಮತ್ತು ಇವರ ಕುಟುಂಬಕ್ಕೆ ಕನಿಷ್ಠ ಕೃತಜ್ಞತೆ ನೀಡದ ಸರ್ಕಾರ ಇದಾಗಿದೆ. ಕೊರೊನಾ ಸೇನಾನಿಗಳಾದ ಇವರ ಸೇವೆಯನ್ನು ಗೌರವಿಸಿ ₹50 ಲಕ್ಷ ವಿಮೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಕೊರೊನಾ ವಿಶೇಷ ಸೇವೆಗಾಗಿ ಈ ಹಿಂದೆ ನೀಡುತ್ತಿದ್ದ ಮಾಸಿಕ ₹1,000 ವಿಶೇಷ ಪ್ರೋತ್ಸಾಹ ಧನವನ್ನು ₹5,000ಕ್ಕೆ ಹೆಚ್ಚಿಸಬೇಕೆಂದು
ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು