ಶುಕ್ರವಾರ, ಜೂನ್ 5, 2020
27 °C
ಜಿಲ್ಲೆಯಿಂದ ಕಳುಹಿಸಿದ 7 ಮಾದರಿಗಳ ವರದಿ ಬಾಕಿ

ಕೊರೊನಾ: ಯಾದಗಿರಿಯಲ್ಲಿ ಮತ್ತೆ 3 ವರದಿ ನೆಗೆಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಕಳುಹಿಸಿದ ಒಟ್ಟು 16 ವ್ಯಕ್ತಿಗಳ ಮಾದರಿಗಳ ಪೈಕಿ ಶುಕ್ರವಾರ 3 ವರದಿ ನೆಗೆಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. ಬಾಕಿ 7 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಪ್ರತ್ಯೇಕವಾಗಿರಿಸಿದ್ದ ಮೂವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ಇನ್ನೂ ಇಬ್ಬರು ಜಿಲ್ಲಾಸ್ಪತ್ರೆ ಯಲ್ಲಿದ್ದಾರೆ. ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಹೋಮ್ ಐಸೊಲೇಷನ್‍ನಲ್ಲಿ 60 ಜನ: ಯಾದಗಿರಿ ತಾಲ್ಲೂಕಿನಲ್ಲಿ 30 ಜನ, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ರೋಗಲಕ್ಷಣ ಕಂಡುಬಂದಿರುವುದಿಲ್ಲ. ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಈ 71 ಜನರ ಪೈಕಿ ಒಟ್ಟು 11 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 60 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು