ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪರೀಕ್ಷೆ: 7 ಹೊಸ ಮಾದರಿ ಸಂಗ್ರಹ

ಹೊಸ ಜಿಲ್ಲಾಸ್ಪತ್ರೆಯಲ್ಲಿ 100 ಐಸೊಲೇಷನ್ ಬೆಡ್ ವ್ಯವಸ್ಥೆ
Last Updated 3 ಏಪ್ರಿಲ್ 2020, 10:38 IST
ಅಕ್ಷರ ಗಾತ್ರ

ಯಾದಗಿರಿ: ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಗುರುವಾರ 7 ಹೊಸ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಸೋಂಕು ಪರೀಕ್ಷೆಗಾಗಿ ಈವರೆಗೆ ಒಟ್ಟು 16 ವ್ಯಕ್ತಿಗಳ ಮಾದರಿ ಕಳುಹಿಸಲಾಗಿದೆ. ಈ ಪೈಕಿ ಈಗಾಗಲೇ ಒಟ್ಟು 6 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಬಾಕಿ 10 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‍ಗೆ ಗುರುವಾರ ಮತ್ತೆ ಇಬ್ಬರನ್ನು ಸೇರಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 5 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಅರಕೇರಾ (ಕೆ) ಹಾಸ್ಟೆಲ್‍ನ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಖಚಿತ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಸೋಂಕು ತಡೆಗೆ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಆತಂಕಪಡಬಾರದು ಮನವಿ ಮಾಡಿದ್ದಾರೆ.

ಹೋಮ್ ಐಸೊಲೇಷನ್‍ನಲ್ಲಿ 60 ಜನ:
ಯಾದಗಿರಿ ತಾಲ್ಲೂಕಿನಲ್ಲಿ 30 ಜನ, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಈ 71 ಜನರ ಪೈಕಿ ಒಟ್ಟು 11 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 60 ಜನರನ್ನು ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

115 ಬೆಡ್‍ಗಳ ವ್ಯವಸ್ಥೆ:ವೈರಸ್ ಸೋಂಕಿತ ರೋಗಿಗಳಿಗಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಹಾಗೂ ಹೊಸ ಜಿಲ್ಲಾಸ್ಪತ್ರೆಯಲ್ಲಿ 100 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ 7 ಕರೆಗಳು ಸ್ವೀಕೃತವಾಗಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT