ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಕೊರೊನಾ ವೈರಸ್ ಸೋಂಕು ಕುರಿತು ಜಾಗೃತಿ ಅಗತ್ಯ

ಟಾಸ್ಕ್‌ಪೋರ್ಸ್‌ ಸಭೆಯಲ್ಲಿ ವೈದ್ಯಾಧಿಕಾರಿ ಡಾ.ಪವನ್‌ ರಾವ್‌ ಅಭಿಮತ
Last Updated 29 ಏಪ್ರಿಲ್ 2020, 10:42 IST
ಅಕ್ಷರ ಗಾತ್ರ

ಹುಣಸಗಿ: ‘ಕೊರೊನಾ ಕುರಿತು ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಕೊಡೇಕಲ್ಲ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನ್ ರಾವ್ ಹೇಳಿದರು.

ತಾಲ್ಲೂಕಿನ ಕೊಡೇಕಲ್ಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಗ್ರಾಮೀಣ ಕಾರ್ಯಪಡೆ (ಟಾಸ್ಕ್‌ಪೋರ್ಸ್‌) ಸಭೆಯಲ್ಲಿ ಮಾತನಾಡಿದರು.

ಸಾರ್ವಜನಿಕರು, ದ್ವಿಚಕ್ರ ವಾಹನ ಸವಾರರು ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸದೇ ಮನೆಯಲ್ಲಿಯೇ ಇರುವುದು ಒಳ್ಳೆಯದು. ಸರ್ಕಾರದ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಕೊಡೇಕಲ್ಲ ಪೊಲೀಸ್ ಠಾಣೆಯ ಪಿಎಸ್ಐ ಬಾಶುಮಿಯಾ ಕೊಂಚೂರು ಮಾತನಾಡಿ,‘ಅನಾವಶ್ಯಕವಾಗಿ ತಿರುಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭಿವೃದ್ಧಿ ಅಧಿಕಾರಿ ಸಂಗಣ್ಣ ನಾಗಬೇನಾಳ ಮಾತನಾಡಿ,‘ಜಿಲ್ಲಾಧಿಕಾರಿಗಳ ನಿರ್ದೇಶದಂತೆ ಗ್ರಾ.ಪಂ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ದಿನಸಿ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಪ್ರತಿನಿತ್ಯ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಗ್ರಾಹಕರು ಮಾಸ್ಕ್ ಧರಿಸಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮೂಲಕ ಅಗತ್ಯ ವಸ್ತು ಖರೀದಿಸಬೇಕು. ನಿಯಮ ಮೀರಿದರೆ ಅಂಗಡಿಗಳ ಪರವಾನಗಿ ರದ್ದು ಪಡಿಸಲಾಗುವುದು’ ಎಂದು ಸಭೆಯಲ್ಲಿ ವ್ಯಾಪಾರಸ್ಥರಿಗೆ ಸೂಚಿಸಿದರು.

ಉಪ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಮುಖಂಡ ಹನುಮಂತನಾಯಕ ಬಬೂಲುಗೌಡ , ಗ್ರಾ.ಪಂ ಅಧ್ಯಕ್ಷೆ ಅಯ್ಯಮ್ಮ ಮಾಗೇರಿ, ಉಪಾಧ್ಯಕ್ಷೆ ನಿಂಬೆವ್ವ ಹಾವೇರಿ, ಸದಸ್ಯರಾದ ಮಲ್ಲು ನವಲಗುಡ್ಡ, ಸೋಮಲಿಂಗಪ್ಪ ದೊರೆ, ಕಾರ್ಯದರ್ಶಿ ಸಂಗಣ್ಣ, ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT