ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

116 ಮಂದಿಗೆ ಕೊರೊನಾ

Last Updated 21 ಸೆಪ್ಟೆಂಬರ್ 2020, 1:58 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಭಾನುವಾರ 87 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 6,543 ಮಂದಿ ಗುಣಮುಖರಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ನಿಂದ 49 ಜನರು ಮೃತಪಟ್ಟಿದ್ದಾರೆ. ಭಾನುವಾರ ಹೊಸದಾಗಿ 116 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7,748ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,156 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT