ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಮತ್ತೆ ಐವರಿಗೆ ಕೋವಿಡ್‌–19

ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 290ಕ್ಕೆ ಏರಿಕೆ
Last Updated 3 ಜೂನ್ 2020, 10:03 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಮಂಗಳವಾರ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆ 290ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಖಚಿತಪಟ್ಟ 290 ಪ್ರಕರಣಗಳ ಪೈಕಿ 28 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಗುರುಮಠಕಲ್ ತಾಲ್ಲೂಕಿನ ಗಣಪುರ ಗ್ರಾಮದ 40 ವರ್ಷದ ಪುರುಷ (ಪಿ-3465), ಚಪೆಟ್ಲಾ ಗ್ರಾಮದ 18 ವರ್ಷದ ಯುವತಿ (ಪಿ-3466), ಮಿನಾಸಪುರ ಗ್ರಾಮದ 19 ವರ್ಷದ ಯುವತಿ (ಪಿ-3467), ಕೇಶ್ವರ ಗ್ರಾಮದ 21 ವರ್ಷದ ಪುರುಷ (ಪಿ-3468), ಯಾದಗಿರಿ ತಾಲ್ಲೂಕಿನ ಅಲ್ಲಿಪುರ ದೊಡ್ಡ ತಾಂಡಾದ 28 ವರ್ಷದ ಪುರುಷ (ಪಿ-3469) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಸೋಂಕಿತರೆಲ್ಲರೂ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಜಿಲ್ಲೆಗೆ ಮೇ 12, 14 ಮತ್ತು 18ರಂದು ಹಿಂದಿರುಗಿರುದ್ದಾರೆ. ಪ್ರಕರಣ ಸಂಖ್ಯೆ ಪಿ-3469 ವ್ಯಕ್ತಿಯನ್ನು ಅಲ್ಲಿಪುರ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಉಳಿದ 4 ಜನರನ್ನು ಗುರುಮಠಕಲ್‍ನ ಎಸ್.ಟಿ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು.

‘ಜಿಲ್ಲೆಯ ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ ಟಿಶ್ಯೂ ಪೇಪರ್ ಅನ್ನು ಬಳಸಬೇಕು. ಕೈ ಸ್ವಚ್ಛಗೊಳಿಸುವ ದ್ರಾವಣ (ಸ್ಯಾನಿಟೈಸರ್) ಅಥವಾ ನೀರು ಮತ್ತು ಸೋಪಿನಿಂದ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಮೂಹ ಗುಂಪು ಸೇರುವಿಕೆಯನ್ನು ಮಾಡಬಾರದು. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಅಥವಾ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 08473 253950 ಹಾಗೂ ವಾಟ್ಸ್‌ಆ್ಯಪ್ ಸಂಖ್ಯೆ 94499 33946 ಗೆ ಸಂಪರ್ಕಿಸಬಹುದು. ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸುವ ಮೂಲಕ ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಸಹಕರಿಸಬೇಕೆಂದು ಎಂದುಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT