ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಲ್ಲಿ 123 ಜನರಿಗೆ ಕೋವಿಡ್ ದೃಢ

Last Updated 22 ಆಗಸ್ಟ್ 2020, 15:55 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಶನಿವಾರ 123 ಜನರಿಗೆ ಕೋವಿಡ್ ಪ್ರಕರಣಗಳು ದೃಢವಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 4,500ಕ್ಕೆ ಏರಿಕೆಯಾಗಿದೆ.

ಶನಿವಾರ 34 ಜನರು ಗುಣಮುಖರಾಗಿದ್ದು, ಇದುವರೆಗೆ 2,916 ಮಂದಿ ಚೇತರಿಸಿಕೊಂಡಿದ್ದಾರೆ. 1,553 ಸಕ್ರಿಯ ಪ್ರಕರಣಗಳಿವೆ.

43 ವರ್ಷದ ಪುರುಷ ಆಗಸ್ಟ್ 16 ರಂದು ನಿಗದಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆಗಸ್ಟ್ 21 ರಂದು ಮೃತಪಟ್ಟಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 31 ಜನರು ಮೃತಪಟ್ಟಿದ್ದಾರೆ.

123 ಪ್ರಕರಣಗಳಲ್ಲಿ 52 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 41 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 30 ಪ್ರಕರಣಗಳು ಸುರಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರಲ್ಲಿ ಕೋವಿಡ್ ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT