ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರದ ಬಗ್ಗೆ ದೂರು ಸಲ್ಲಿಸಿ: ಡಾ.ಸಂತೋಷ ಕೆ.ಎಂ

Last Updated 9 ಜನವರಿ 2020, 15:55 IST
ಅಕ್ಷರ ಗಾತ್ರ

ಯಾದಗಿರಿ: ಸರ್ಕಾರ 2016ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಿದ್ದು, ಸರ್ಕಾರಿ ಮತ್ತು ಅರೆ-ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳು ಇದ್ದಲ್ಲಿ ಹಾಗೂ ಸಾರ್ವಜನಿಕ ನೌಕರರು ತಮ್ಮ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಮಾಡಿದ್ದರ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರು ದೂರು ನೀಡಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‍ಪಿ ಡಾ.ಸಂತೋಷ ಕೆ.ಎಂ., ತಿಳಿಸಿದರು.

ನಗರದ ತಹಶೀಲ್ದಾರ್ಕಾರ್ಯಾಲಯದ ಆವರಣದಲ್ಲಿ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಂತರ ಅವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಧುಸೂದನ ರೆಡ್ಡಿ, ತಾಲ್ಲೂಕು ನೋಂದಣಾಧಿಕಾರಿ ರಾಮಚಂದ್ರರಾವ್, ಪೊಲೀಸ್ ಇನ್‍ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ, ಸಿಬ್ಬಂದಿಗಳಾದ ಅಮರನಾಥ ಗಾಯಕವಾಡ, ಸಾಬಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT