ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಜನರಲ್ಲಿ ಅರಿವು ಮೂಡಿಸಲು ಸೂಚನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನಾ ಸಭೆ
Last Updated 19 ಸೆಪ್ಟೆಂಬರ್ 2020, 15:56 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್-19 ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಧಿಕಾರಿಗಳೊಂದಿಗೆ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿಯ ಮತ್ತು ಮತ್ತಿತರ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗುಂಪು ಸೇರುವುದನ್ನು ಮಾಡಬಾರದು ಎಂದು ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಲಾಕ್‍ಡೌನ್ ಸಂದರ್ಭದಲ್ಲಿ ಮಹಾನಗರ, ಪಟ್ಟಣಗಳಿಂದ ಹಳ್ಳಿಗಳಿಗೆ ಹಿಂತಿರುಗಿದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೂಗ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ 72,728 ಮಾದರಿಗಳು ಸೋಂಕು ಪರೀಕ್ಷೆಗೆ ಕಳಿಸಲಾಗಿದೆ. 7505 ಪಾಸಿಟಿವ್, 64672 ನೆಗೆಟಿವ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೂ 6,354 ಜನರು ಸೋಂಕಿನಿಂದ ಗುಣಮುಖರಾಗಿದ್ದು, 49 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 571 ಕಂಟೈನ್‍ಮೆಂಟ್ ಝೋನ್ಸ್ ಹಾಗೂ 250 ಡಿ ನೋಟಿಫೈಡ್ ಕಂಟೈನ್‍ಮೆಂಟ್ ಝೋನ್ಸ್‌ಗಳಿವೆ’ ಎಂದು ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ ಮಾಹಿತಿ ನೀಡಿದರು.

ಮುದ್ನಾಳದಲ್ಲಿರುವ ಕೋವಿಡ್ ಜಿಲ್ಲಾ ಆಸ್ಪತ್ರೆ 297 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಅದರಲ್ಲಿ 132 ಆಕ್ಸಿಜನ್ ಹಾಸಿಗೆ, 15 ಹೈ ಡಿಪೆಂಡೆನ್ಸಿ ಯುನಿಟ್, 15 ಐಸಿಯು ಹಾಸಿಗೆ, 14 ವೆಂಟಿಲೇಟರ್‌ಗಳು, ಶೀಘ್ರದಲ್ಲೆ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್‌ ಅನ್ನು ಉದ್ಘಾಟಿಸಲಾಗುವುದು. 140 ಜಂಬೊ ಆಕ್ಸಿಜನ್ ಸಿಲೆಂಡರ್‌ಗಳಿವೆ ಎಂದು ತಿಳಿಸಿದರು.

50 ಕೋವಿಡ್ ಹಾಸಿಗೆಗಳನ್ನು ಶಹಾಪುರ, ಸುರಪುರ ತಾಲ್ಲೂಕು ಆಸ್ಪತ್ರೆಗಳಲ್ಲಿ ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಜಿಲ್ಲೆಯಲ್ಲಿ 18,225 ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕಿಟ್‍ಗಳು ಸ್ವೀಕರಿಸಿದ್ದು, ಅದರಲ್ಲಿ 16,993 ಪರೀಕ್ಷಿಸಿದರಲ್ಲಿ 14,191 ನೆಗೆಟಿವ್, 2002 ಪಾಸಿಟಿವ್ ಬಂದಿವೆ ಎಂದು ಅವರು ವಿವರಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಸೋಂಕು ತಡೆಗಟ್ಟಲು ಜಿಲ್ಲೆಯಲ್ಲಿ 15 ಸಂಚಾರಿ ಜ್ವರ ತಪಾಸಣಾ ವಾಹನ ಹಾಗೂ ಗಂಟಲು ದ್ರವ ಮಾದರಿ ಸಂಗ್ರಹ ತಂಡಗಳನ್ನು ರಚಿಸಲಾಗಿದೆ. ಯಾದಗಿರಿ 6, ಶಹಾಪುರ 4 ಹಾಗೂ ಸುರಪುರ 5 ರಂತೆ ಒಟ್ಟು 15 ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ಲ್ಯಾಬ್ ಟೆಕ್ನಿಷನ್, ಒಬ್ಬರು ಡಾಟಾ ಎಂಟ್ರಿ ಆಪರೇಟರ್ ಇರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ಅಶ್ವೀಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಡಾ. ಸೂರ್ಯಪ್ರಕಾಶ ಎಂ.ಕಂದಕೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಾಜೀದ್, ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

***

ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಆದರೆ, ನುರಿತ ತಜ್ಞ ವೈದ್ಯರ ಕೊರತೆ ಇದ್ದು, ಸದ್ಯದಲ್ಲೆ 5 ಜನ ವೈದ್ಯರ ನೇಮಕ ಪ್ರಕ್ರಿಯೆ ನಡಿಯುತ್ತಿದೆ

- ಡಾ.ಭಗವಂತ ಅನವಾರ,ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT