ಬುಧವಾರ, ಜನವರಿ 19, 2022
18 °C

ಕೋವಿಡ್ 2ನೇ ಡೋಸ್ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಪ್ರತಿ ಗ್ರಾಮದ ಬೀಟ್ ಪೊಲೀಸರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು ಗ್ರಾಮಲೆಕ್ಕಿಗರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕೇಂದ್ರಗಳಲ್ಲಿ ಜನರನ್ನು ಲಸಿಕೆ ಹಾಕಿಸಿಕೊಳ್ಳಲು ಕೇಂದ್ರಕ್ಕೆ ಕರೆತರುವಂತೆ ಮನವೊಲಿಸಬೇಕು ಮತ್ತು ಎರಡನೇ ಡೋಸ್ ಲಸಿಕೆಯ ತೀವ್ರಗತಿಯಲ್ಲಿ ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌., ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆನ್‌ಲೈನ್‌ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ನೋಡಲ್ ಅಧಿಕಾರಿಗಳಿಗೆ 3 ಗ್ರಾಮಗಳ ಜವಾಬ್ದಾರಿ ನೀಡಲಾಗಿದೆ. ಅವರು ಬೆಳಿಗ್ಗೆ 6 ಗಂಟೆಯಿಂದಲೇ ಲಸಿಕಾಕರಣ ಪ್ರಾರಂಭಿಸಿ ಶೇ ನೂರರಷ್ಟು ಲಸಿಕಾ ನೀಡಿಕೆ ಗುರಿ ತಲುಪಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಲಸಿಕಾ ಕಾರ್ಯಕ್ರಮಕ್ಕೆ ಬೀಟ್ ಪೊಲೀಸರು ಕಡ್ಡಾಯವಾಗಿ ಲಸಿಕಾಕರಣ ಕೇಂದ್ರದಲ್ಲಿ ಹಾಜರಿರಲು ಸೂಚಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರತಿಯೊಬ್ಬ ಅಧಿಕಾರಿಯು ಎಷ್ಟು ಜನಕ್ಕೆ ಲಸಿಕೆ ಹಾಕಿಸಿದ್ದಾರೆ ಮತ್ತು ಅವರ ಕಾರ್ಯವೈಖರಿಯನ್ನು ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತದೆ. ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಆರ್‌ಸಿಎಚ್‌ಒ ಲಕ್ಷ್ಮೀಕಾಂತ ಒಂಟಿಪೀರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ರಾಜು, ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಭಗವಂತ ಅನ್ವರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು