ಯಾದಗಿರಿ: ಕೋವಿಡ್-19 ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವುದರೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೋವಿಡ್-19 ಹರಡದಂತೆ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಕುರಿತು ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಬೇಧಿ ಉಂಟಾದಾಗ ಭಯಪಡುವ ಅಗತ್ಯವಿಲ್ಲ. ಸಮೀಪದ ಸಾರ್ವಜನಿಕ ಅಥವಾ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತೆ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ನಗರ ಪ್ರದೇಶದಲ್ಲಿ 157 ಜನ ಕ್ವಾರಂಟೈನ್ನಲ್ಲಿ ಇದ್ದಾರೆ. ಅವರಲ್ಲಿ ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ -57, ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ -4, ಗುರುಮಠಕಲ್ ಪುರಸಭೆ ವ್ಯಾಪ್ತಿಯಲ್ಲಿ -28, ಸುರಪುರ ನಗರಸಭೆ ವ್ಯಾಪ್ತಿಯಲ್ಲಿ - 45, ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ - 23 ಜನರು ಹಾಗೂ ಗ್ರಾಮೀಣ ಭಾಗದಲ್ಲಿ ಶಹಾಪುರ ತಾಲ್ಲೂಕಿನಲ್ಲಿ -34, ಸುರಪುರ ತಾಲ್ಲೂಕಿನಲ್ಲಿ- 22, ಯಾದಗಿರಿ ತಾಲ್ಲೂಕಿನಲ್ಲಿ- 13 ಜನರು ಕ್ವಾರಂಟೈನ್ನಲ್ಲಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡಿ ಆನ್ಲೈನ್ನಲ್ಲಿ ನೋಂದಣಿ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಂಪರ್ಕ ಪತ್ತೆ ಹಚ್ಚುವುದು: ಮಾಸ್ಕ್ ಧರಿಸದೇ ಇರುವವರಿಗೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆಯಿಂದ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ವತಿಯಿಂದ ಕಳೆದ ಒಂದು ವಾರದಲ್ಲಿ ಒಟ್ಟು 1,415 ಜನರಿಗೆ ದಂಡ ವಿಧಿಸಲಾಗಿದ್ದು ₹1,41,500 ದಂಡದ ಮೊತ್ತ ಸಂಗ್ರಹವಾಗಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.