ಶನಿವಾರ, ಆಗಸ್ಟ್ 8, 2020
23 °C

ಹಸೆಮಣೆ ಏರಬೇಕಿದ್ದ ಯುವಕನಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಬೆಂಗಳೂರಿನಿಂದ ಜಿಲ್ಲೆಗೆ ಬಂದಿದ್ದ ಮದುಮಗನಿಗೆ ಕೋವಿಡ್ ದೃಢಪಟ್ಟಿದ್ದು, ಹಸೆಮಣೆ ಏರುವ ಮುನ್ನವೇ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜುಲೈ 13ಕ್ಕೆ ನಿಗದಿಯಾಗಿದ್ದ ಮದುವೆ ಮುಂದೂಡಲಾಗಿದೆ.

ಶಹಾಪುರ ತಾಲ್ಲೂಕಿನ ಗ್ರಾಮವೊಂದರ ಯುವಕ ಮದುವೆಗೆಂದೇ ಜೂನ್‌ 19ಕ್ಕೆ ಬೆಂಗಳೂರಿನಿಂದ ಮನೆಗೆ ಮರಳಿದ್ದು,  ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ತೀವ್ರ ಶೀತ ಕಾಡುತ್ತಿದ್ದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ, ಕೋವಿಡ್ ತಗುಲಿರುವುದು ದೃಢಪಟ್ಟಿತು.

ಮದುವೆ ಕೆಲಸಕ್ಕಾಗಿ ಯುವಕ ವಿವಿಧೆಡೆ ಓಡಾಡಿದ್ದು, ಮದುವೆ ಮನೆ ಸೇರಿದಂತೆ ಗ್ರಾಮದಲ್ಲಿ ಈಗ ಕೊರೊನಾ ಭೀತಿ ಆವರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು