ಗುರುವಾರ , ಆಗಸ್ಟ್ 5, 2021
21 °C

ಗುರುಮಠಕಲ್: ಕೋವಿಡ್ ಹಗರಣ ಸಿಬಿಐ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮಠಕಲ್: ಕೋವಿಡ್-19 ಚಿಕಿತ್ಸಾ ಸಲಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಬಿ.ಎಸ್.ಪಿ ಕಾರ್ಯಕರ್ತರು ಸೋಮವಾರ ಇಲ್ಲಿ ಗಂಗಾಪರಮೇಶ್ವರಿ ವೃತ್ತದಿಂದ ನಾಡಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಸಂಗಮೇಶ ಜಿಡಗೆ ಅವರಿಗೆ ಮನವಿಪತ್ರ ನೀಡಿದರು.

ಮುಂಬೈನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ನಿವಾಸ ರಾಜಗೃಹದಲ್ಲಿ ಕಿಟಕಿ ಧ್ವಂಸ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು, ತೈಲ ದರ ಏರಿಕೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ವಾಸು ಮಾತನಾಡಿ, ರಾಜಗೃಹಕ್ಕೆ ಹಾನಿ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು, ರಾಜಗೃಹವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ.ತಾಜ್, ಸಂಯೋಜಕ ಬಸವರಾಜ ರಾಮಸಮುದ್ರ, ಉಪಾಧ್ಯಕ್ಷ ಪರಶುರಾಮ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಭೀಮಶಪ್ಪ ಗಾಡದಾನ, ಕಾರ್ಯದರ್ಶಿ ಅಶೋಕ ಗಿರಿಗಿರಿ, ತಾಲೂಕ ಘಟಕದ ಅಧ್ಯಕ್ಷ ಮಹಾದೇವ ಚಪೇಟ್ಲಾ, ಪ್ರಕಾಶ ಬಂಟು, ಭೀಮು ಗಿರಿಗಿರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.