ಯಾದಗಿರಿ: ಮಹಾರಾಷ್ಟ್ರದಲ್ಲಿ ಕೋವಿಡ್-19 ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವುದು ಮತ್ತು ಕೋವಿಡ್ 2ನೇ ಅಲೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಸರ್ಕಾರ ಸೂಚನೆ ನೀಡಿದೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್-19 ಹರಡುವಿಕೆ ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19ರ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್-19 ಎರಡನೇ ಅಲೆ ಪ್ರಾರಂಭವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ತಿಳಿದುಬಂದಿದೆ ಎಂದರು.

ಜಿಲ್ಲೆಯ ಗಡಿಭಾಗದಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಬರುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್ಟಿಪಿಸಿಆರ್ ನೆಗೆಟಿವ್ ವರದಿ ತೋರಿಸಬೇಕು. ಈ ಬಗ್ಗೆ ಬಸ್ಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಅಶ್ವಿಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವಸ್ವಾಮಿ ಹಿರೇಮಠ, ಆರ್ಸಿಎಚ್ಒ ಡಾ.ಸೂರ್ಯ ಪ್ರಕಾಶ, ಡಿಎಲ್ಒ ಡಾ.ಭಗವಂತ ಅನವಾರ, ಡಾ.ಸಾಜೀದ್, ಡಾ.ಅನೀಲ ತಾಳಿಕೋಟಿ, ಶಹಾಪುರ ಟಿಎಚ್ಒ ಡಾ.ರಮೇಶ ಇದ್ದರು.

ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಯಾದಗಿರಿ: ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ 45 ರಿಂದ 59 ವರ್ಷದೊಳಗಿನ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಕ್ಕೆ ಚಾಲನೆ ನೀಡಿದರು.

‘ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಯಲ್ಲಿ₹250 ಪಾವತಿಸಿ ಲಸಿಕೆ ಪಡೆಯಬಹುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಲಸಿಕೆ ಪಡೆಯಲು ಆಸ್ಪತ್ರೆಗೆ ಬರುವ ವೇಳೆ ಆಧಾರ್ ಕಾರ್ಡ್ ಅಥವಾ ಚುನಾವಣಾ ಗುರುತಿನ ಚೀಟಿ ತರಬೇಕು. ಆನ್ಲೈನ್ನಲ್ಲಿ ನೋಂದಾಯಿಸುವಾಗ ಕೇಳಲಾದ ಗುರುತಿನ ಚೀಟಿ ತರಬೇಕು. 45 ರಿಂದ 59 ರ ವರ್ಷದೊಳಗಿನ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ವೈದ್ಯರಿಂದ ಆರೋಗ್ಯ ಸಮಸ್ಯೆ ಇರುವ ಕುರಿತು ದೃಢೀಕರಣ ಪತ್ರ ಹಾಜರುಪಡಿಸಬೇಕು’ ಎಂದರು.

ತಾಂತ್ರಿಕ ತೊಂದರೆಯಿಂದ ತಡ: ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ಹಾಕಲು ತಾಂತ್ರಿಕ ತೊಂದರೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ತಡವಾಯಿತು. ಲಸಿಕೆ ನೀಡಲು ವೈದ್ಯರು, ದಾದಿಯರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಆ್ಯಪ್ನಲ್ಲಿ ತಾಂತ್ರಿಕ ದೋಷದಿಂದ ತಡವಾಗಿ ಆರಂಭವಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸವಸ್ವಾಮಿ ಹಿರೇಮಠ, ಆರ್ಸಿಎಚ್ ಅಧಿಕಾರಿ ಡಾ.ಸೂರ್ಯಪ್ರಕಾಶ, ಆರ್ಎಂಒ ಡಾ.ನೀಲಮ್ಮ, ಕೊರೊನಾ ಲಸಿಕೆ ಅಧಿಕಾರಿ ಡಾ.ಪ್ರೇಮಾ,ದಾದಿಶಾರದಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.