ಭಾನುವಾರ, ಮೇ 22, 2022
24 °C

ಯಾದಗಿರಿಯ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ನಗರದ ವಿಬಿಆರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಶಿಲ್ಡ್‌ ಲಸಿಕೆ ನೀಡಲಾಯಿತು.

ಖಾಸಗಿ ಆಸ್ಪತ್ರೆಯ 290 ಸಿಬ್ಬಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 176 ಮಂದಿ ಲಸಿಕೆ ಪಡೆದಿದ್ದಾರೆ. ಇದು ಜಿಲ್ಲೆಯಲ್ಲಿಯೇ ಶುಕ್ರವಾರ ನೀಡಿದ ಅತಿ ಹೆಚ್ಚಿನ ಲಸಿಕೆ ನೀಡಿಕೆಯಾಗಿದೆ.

ಲಸಿಕೆ ಪಡೆದು ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಮಾತನಾಡಿ, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮಗಳು ಅಥವಾ ಸಮಸ್ಯೆ ಉಂಟಾಗುವುದಿಲ್ಲ. ದೇಶದಲ್ಲಿಯೇ ಅಭಿವೃದ್ಧಿಪಡಿಸಿದ ಲಸಿಕೆ ಇದಾಗಿದ್ದು, ದೇಶದ ವೈಜ್ಞಾನಿಕ ಕ್ಷೇತ್ರ ಹಾಗೂ ವೈದ್ಯಕೀಯ ವಿಜ್ಞಾನ ತುಂಬಾ ಅಭಿವೃದ್ಧಿ ಸಾಧಿಸಿದೆ ಎಂದರು.

ಆದರಂತೆ ಹಳೆ ಜಿಲ್ಲಾಸ್ಪತ್ರೆಯಲ್ಲಿಯೂ 199 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. 115 ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಕಡೆಯೂ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಿತಾ ಎಸ್‌.ಕೆ ನೇತೃತ್ವ ವಹಿಸಿದ್ದರು.

ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಪಾಟೀಲ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಆರ್‌ಸಿಎಚ್‌ಒ ಡಾ.ಸೂರ್ಯಪ್ರಕಾಶ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ.ಪಾಟೀಲ, ಡಾ.ಶರಣರೆಡ್ಡಿ ಕೋಡ್ಲಾ, ಡಾ.ಸುನೀಲ್ ಮೂಕ್ಕನೋರ, ಡಾ.ಬಸವರಾಜ ನರಣಸಿಗಿ, ಡಾ.ದೇವಾನಂದ, ಡಾ.ಪ್ರಶಾಂತ ಬಾಸ್ಕುಕರ್‌ ಸೇರಿದಂತೆ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು