ಯಾದಗಿರಿ: ‘ಮಂಗಳವಾರ (ಅ.19) ಈದ್ ಮಿಲಾದ್ ಇರುವ ಕಾರಣ ಮಸೀದಿಯಲ್ಲಿ ಜನ ಸೇರುತ್ತಾರೆ. ಅಲ್ಲಿಗೆ ಬರುವವರಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕು. ಈ ಸಂಬಂಧ ಧಾರ್ಮಿಕ ಮುಖಂಡರ ಜತೆ ಸಮನ್ವಯದಿಂದ ಕೆಲಸ ಮಾಡಿ ಲಸಿಕಾ ಗುರಿ ತಲುಪಲು ಸಹಕಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಆನ್‌ಲೈನ್‌ನಲ್ಲಿ ಮಾತನಾಡಿ,‘ಪ್ರತಿದಿನ ಲಸಿಕಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದರು.

ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಜನರ ಮನವೊಲಿಸಿ ಲಸಿಕಾ ಕೇಂದ್ರಗಳಿಗೆ ಕರೆತರಬೇಕು ಎಂದರು.

ಪ್ರತಿಯೊಬ್ಬ ಅಧಿಕಾರಿ ಎಷ್ಟು ಜನಕ್ಕೆ ಲಸಿಕೆ ಹಾಕಿಸಿದ್ದಾರೆ. ಅವರ ಕಾರ್ಯವೈಖರಿಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತದೆ. ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಕೊರೊನಾ ತಡೆಗಟ್ಟಲು ಜಿಲ್ಲಾಡಳಿತ ನಿರಂತರವಾಗಿ ಶ್ರಮಿಸುತ್ತಿದೆ. 3ನೇ ಅಲೆ ಬರುವುದಕ್ಕಿಂತ ಮುಂಚೆಯೇ ಲಸಿಕೆ ಹಾಕಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಹಂತ ಹಂತವಾಗಿ ಲಸಿಕೆ ನೀಡಲಾಗುತ್ತಿದೆ. ಅನೇಕ ಹಳ್ಳಿಯಲ್ಲಿ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ತಪ್ಪು ಕಲ್ಪನೆಗಳಿಂದ ಹೊರ ಬರಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಆರ್‌ಸಿಎಚ್‌ಒ ಲಕ್ಷ್ಮೀಕಾಂತ ಒಂಟಿಪೀರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಜಿಲ್ಲಾ ನೋಡಲ್ ಅಧಿಕಾರಿ ಡಾ.ಸಾದಿಕ್, ಡಿಡಿಪಿಐ ಶಾಂತಗೌಡ ಪಾಟೀಲ, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಕ್ಕಪ್ಪ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.