ಭಾನುವಾರ, ಡಿಸೆಂಬರ್ 5, 2021
25 °C
ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ

ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕೊಂಕಲ್‌ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸಂಜೆ ಕಟ್ಟಿಗೆ ತರಲು ಹೋಗಿದ್ದ ಗ್ರಾಮಸ್ಥ ವೆಂಕಟೇಶ (40) ಎಂಬುವರ ಮೇಲೆ ಮೊಸಳೆ ದಾಳಿ ನಡೆಸಿ, ನೀರಿನಲ್ಲಿ ಎಳೆದೊಯ್ದಿದೆ.

ವೆಂಕಟೇಶ ಪತ್ತೆಗಾಗಿ ಹುಡುಕಾಟ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಗುರುವಾರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ನಡೆಯಲಿದೆ ಎಂದು ವಡಗೇರಾ ಠಾಣೆ ಪೊಲೀಸರು
ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.