ಭಾನುವಾರ, ನವೆಂಬರ್ 28, 2021
20 °C

ಯಕ್ಷಂತಿ ಬಳಿ ಮೊಸಳೆ ದಾಳಿ: ಮೇಕೆ ಸಾವು

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

Prajavani

ವಡಗೇರಾ: ತಾಲ್ಲೂಕಿನ ಯಕ್ಷಂತಿ ಗ್ರಾಮದಲ್ಲಿ ಕೃಷ್ಣಾ ನದಿಯೊಳಗೆ ನೀರು ಕುಡಿಯಲು ಹೋಗಿದ್ದ ಮೇಕೆ ಮೇಲೆ ಮೊಸಳೆ ದಾಳಿ ಮಾಡಿದ್ದರಿಂದ ಮೇಕೆ ಸಾವನ್ನಪ್ಪಿದ್ದ ಘಟನೆ ಭಾನುವಾರ ನಡೆದಿದೆ.

ಗ್ರಾಮದ ಹುಸೇನ್ ಸಾಬ್ ಜಲಾಲ್ ಸಾಬ್ ಎಂಬುವವರ ಮೇಕೆ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಮೊಸಳೆ ದಾಳಿ ಬಗ್ಗೆ ಆತಂಕ ಹೆಚ್ಚಾಗಿದೆ.

ಸದ್ಯ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮೊಸಳೆಗಳು ಪ್ರತ್ಯಕ್ಷವಾಗುತ್ತಿವೆ. ಕೆಲ ತಿಂಗಳ ಹಿಂದೆ ಕುರಿಗಳನ್ನು ಸ್ನಾನ ಮಾಡಿಸಲು ಹೋಗಿದ್ದ ಕುರಿಗಾಹಿ ಮೇಲೆ ಮೊಸಳೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೆ ಈ ಘಟನೆ ಮರುಕಳಿಸಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು