ಶನಿವಾರ, ಏಪ್ರಿಲ್ 1, 2023
23 °C

ಬೆಳೆ ವಿಮೆ: ಪ್ರಚಾರ ವಾಹನಕ್ಕೆ ಚಾಲನೆ

ಫ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ಜುಲೈ 1 ರಿಂದ ಜುಲೈ 7 ರ ವರೆಗೆ ಬೆಳೆ ವಿಮೆ ಪ್ರಚಾರ ಮತ್ತು ಜಾಗೃತಿ ಸಪ್ತಾಹ ಆಚರಿಸಲಾಗುತ್ತಿದೆ. ಈ ಕಾರಣದಿಂದ ಬೆಳೆ ವಿಮೆ ಮಾಹಿತಿ ಒಳಗೊಂಡ ಪ್ರಚಾರದ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಕಚೇರಿಯ ಆವರಣದಲ್ಲಿ ಚಾಲನೆ ನೀಡಿದರು.

ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್, ಇನ್ಶುರೆನ್ಸ್ ಕಂಪನಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಲಕ್ಷ್ಮೀಕಾಂತ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕೃಷಿ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು