ಬುಧವಾರ, ಡಿಸೆಂಬರ್ 8, 2021
28 °C
ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಿ: ಶಾಸಕ ರಾಜೂಗೌಡ

ಸುರಪುರ: ₹ 18.51 ಕೋಟಿ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ವಾಗಣಗೇರಾ ಸಮೀಪದ ಅರಸಿ ಕೆರೆಗೆ ಕೃಷ್ಣ ನದಿಯಿಂದ ನೀರು ತುಂಬಿಸಿ ಸರಬರಾಜು ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಪ್ರತ್ಯೇಕ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಶಾಸಕ ರಾಜೂಗೌಡ ಹೇಳಿದರು.

ನಗರದ ತುಳಸಾಂಬಾ ದೇವಸ್ಥಾನದ ಹತ್ತಿರ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಹೋಗಬೇಕು. ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ಕನಕ ಭವನದ ನಿವೇಶನವನ್ನು ಕೆಲವರು ಒತ್ತುವರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಒತ್ತುವರಿ ಮಾಡಿದವರು ತಕ್ಷಣಕ್ಕೆ ಸ್ವಯಂಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಿ ತೆರವುಗೊಳಿಸಲಾಗುವುದು’ ಎಂದು ತಿಳಿಸಿದರು.

ನಗರೋತ್ಥಾನ ಯೋಜನೆ 3ನೇ ಹಂತದ ₹5.10 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು, ಪೈಪ್‍ಲೈನ್ ಕಾಮಗಾರಿ, ಎಸ್‍ಎಫ್‍ಸಿ ಯೋಜನೆಯಡಿ ₹3 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ, ಒಳಚರಂಡಿ, ವೆಂಕಟಾಪುರ ಬಳಿಯ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ₹2.89 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ, ₹ 3.24 ಕೋಟಿ ವೆಚ್ಚದಲ್ಲಿ ಪಶು ಆಸ್ಪತ್ರೆ ಕಾಮಗಾರಿ, ರಂಗಂಪೇಟೆಯ ಅಂಬಾಭವಾನಿ ದೇವಸ್ಥಾನದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ಶಾಸಕರ ಅನುದಾನದಲ್ಲಿ ₹ 75 ಲಕ್ಷದ ಕನಕ ಭವನ, ಕೆಕೆಆರ್‌ಡಿಬಿ ಯೋಜನೆಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ಗ್ರಂಥಾಲಯ, ₹ 40 ಲಕ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯ ಸೇರಿದಂತೆ ಇತರೆ ಅಭಿವೃದ್ದಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ, ಮುಖಂಡರಾದ ರಾಜಾ ಹನುಮಪ್ಪನಾಯಕ, ಶಂಕರ ನಾಯಕ, ಯಲ್ಲಪ್ಪ ಕುರಕುಂದಿ, ಭೀಮಣ್ಣ ಮಾಸ್ಟರ್, ನಿಂಗಣ್ಣ ಚಿಂಚೋಡಿ, ಎಚ್.ಸಿ. ಪಾಟೀಲ್, ವೇಣುಮಾಧವ ನಾಯಕ, ನರಸಿಂಹಕಾಂತ ಪಂಚಮಗಿರಿ, ರಂಗನಗೌಡ ಪಾಟೀಲ್, ದುರ್ಗಪ್ಪ ಗೋಗಿಕರ್, ಮಲ್ಲೇಶಿ ಪಾಟೀಲ್, ಮಲ್ಲಣ್ಣ ಐಕೂರು, ಶಿವರಾಯ ಕಾಡ್ಲೂರು, ದುರ್ಗಪ್ಪ ಎಳಿಮೇಲಿ, ಚಂದ್ರು ಎಲಿಗಾರ, ಪೌರಾಯುಕ್ತ ಜೀವನ್‍ಕುಮಾರ್ ಕಟ್ಟಿಮನಿ, ಭೂ ಸೇನಾ ನಿಗಮದ ಸದಾನಂದ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು