ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ, ಸೇತುವೆ ದುರಸ್ತಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಸೂಚನೆ

ಪ್ರವಾಹದಿಂದ ಹಾಳಾದ ರಸ್ತೆ ಸರಪಡಿಸಿ: ಡಾ.ರಾಗಪ್ರಿಯಾ
Last Updated 21 ನವೆಂಬರ್ 2020, 16:23 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಂಡು ಗುಣಮಟ್ಟದಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿ ಕೈಗೊಳ್ಳುವ ಕುರಿತ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಿನ ಮಳೆಯಾಗಿ ಅತಿವೃಷ್ಟಿ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಗಳು ಹಾಗೂ ಸೇತುವೆಗಳು ಹಾನಿಯಾಗಿವೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ದುರಸ್ತಿಗಾಗಿ ₹17 ಕೋಟಿ ಅನುದಾನ ಬಿಡುಗಡೆಯಾಗಿದೆ. ಆ ಹಣವನ್ನು ಬಳಸಿಕೊಂಡು ಹಾನಿಗೀಡಾದ ರಸ್ತೆಗಳು ಹಾಗೂ ಸೇತುವೆಗಳಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ದೇವಿದಾಸ್ ಚವ್ಹಾಣ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಯಾದಗಿರಿ ತಾಲ್ಲೂಕಿನ ಯಾದಗಿರಿ-ಸೈದಾಪುರ, ಯಾದಗಿರಿ-ಚಿತ್ತಾಪುರ, ಮುಂಡರಗಿಯಂದ ಅಚ್ಚೋಲಾ, ಕೊಂಕಲ್ ಕ್ರಾಸ್‍ನಿಂದ ಅರಕೇರಾ ರಸ್ತೆ, ಎಲ್ಹೇರಿ–ಶೆಟ್ಟಿಕೇರಾ ರಸ್ತೆ, ಗುರುಮಠಕಲ್- ನಂದೇಪಲ್ಲಿ, ಅಜಲಾಪುರ- ನಂದೇಪಲ್ಲಿ, ಯರಗೋಳ- ಬಾಚವಾರ ರಸ್ತೆ, ಸೈದಾಪುರ-ಅಜಲಾಪುರ ರಸ್ತೆ, ಪಸ್ಸುಲ್- ಕಾಳಬೆಳಗುಂದ, ಶಹಾಪುರ ತಾಲ್ಲೂಕಿನ ಹೆಬ್ಬಾಳು- ಕಚಕನೂರು, ಸುರಪುರ ತಾಲ್ಲೂಕಿನ ಗೆದ್ದಲಮಾರಿ-ವಾಯುಕುಪ್ಪೆ ಬಳಶೆಟ್ಟಿಹಾಳ ರಸ್ತೆ, ಬಂಡೋಳ್ಳಿ- ಜೋಗುಂಡಬಾವಿ ರಸ್ತೆ ಸೇರಿದಂತೆ ಹಾನಿಗೀಡಾಗಿರುವ ವಿವಿಧ ರಸ್ತೆಗಳ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೊಳ್ಳುವಂತೆ ತಿಳಿಸಿದರು.

ಪಂಚಾಯತ್ ರಾಜ್ ಎಂಜಿನಿಯರಿಂಗ್ ವ್ಯಾಪ್ತಿಯಡಿ ಹಾನಿಗೀಡಾಗಿರುವ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿ ಕಾರ್ಯವನ್ನು ಶೀಘ್ರವೇ ಕೈಗೊಳ್ಳುವಂತೆ ಪಿಆರ್‍ಇಡಿ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT