ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಡಿಸಿ ಸೂಚನೆ

ಸ್ಮೈಲ್ ಫೌಂಡೇಷನ್ ವತಿಯಿಂದ ಗಾಂಧೀಜಿ ವೃತ್ತದಲ್ಲಿ ಮಾಸ್ಕ್ ವಿತರಣೆ
Last Updated 2 ಅಕ್ಟೋಬರ್ 2020, 14:39 IST
ಅಕ್ಷರ ಗಾತ್ರ

ಯಾದಗಿರಿ: ‘ಕೊರೊನಾ ಸೋಂಕು ತಡೆಗೆ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪುಗೂಡದೆ ಅಂತರ ಕಾಪಾಡುವುದೇ ಪರಿಹಾರ’ ಎಂದು ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ ಅಭಿಪ್ರಾಯಿಸಿದರು.

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಮೈಲ್ ಫೌಂಡೇಷನ್‌ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾರ್ವಜನಿಕರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಾಸ್ಕ್ ಹಾಕಿಕೊಳ್ಳದೆ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಗುವುದು ಎಂದು ನಗರಗಳಲ್ಲಿ ನಗರಸಭೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸಬೇಕು. ಕೋವಿಡ್ ಸೋಂಕಿನ ಅಪಾಯದ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕು’ ಎಂದು ಹೇಳಿದರು.

‘ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು ನಿಷೇಧಿಸಿದೆ. ಸಾರ್ವಜನಿಕರು ಕಿರಾಣಿ ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಖರೀದಿಸುವಾಗ ಅಂತರ ಕಾಯ್ದುಕೊಳ್ಳಬೇಕು’ ಎಂದು ತಿಳಿಸಿದರು.

ಇದೇ ವೇಳೆ ಸ್ಮೈಲ್ ಫೌಂಡೇಷನ್ ವತಿಯಿಂದ ಒಂದು ಸಾವಿರ ಮಾಸ್ಕ್ ವಿತರಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಇಂದೂಮತಿ ಪಾಟೀಲ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ಭಗವಂತ ಅನವಾರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸಾಜೀದ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಮೈಲ್ ಫೌಂಡೇಷನ್‍ನ ಸದಸ್ಯರು ಇದ್ದರು.

ಮಾಸ್ಕ್ ಧರಿಸದ ವ್ಯಕ್ತಿಯು ಎರಡು ಮೂರು ಬಾರಿ ಸಿಕ್ಕಿಕೊಂಡರೆ ಅಂಥವರ ವಿರುದ್ಧ ಪ್ರಕರಣ ಕೂಡ ದಾಖಲಿಸಲಾಗುವುದು
ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT