ಯಾದಗಿರಿ: ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಸೇತುವೆ ಕುಸಿದು ಬಿದ್ದಿದ್ದು, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಬ್ಯಾರಿಕೇಡ್‌ಗಳನ್ನು ಹಾಕಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸೇತುವೆಯು ಯಡ್ಡಳ್ಳಿ ಗ್ರಾಮದಿಂದ ಹೋರುಂಚಾ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯಾಗಿದೆ. ಹತ್ತಿಕುಣಿ ಡ್ಯಾಂ ಮತ್ತು ಸೌದಾಗರ್ ಡ್ಯಾಂನಿಂದ ಬರುವ ನೀರು ಈ ಸೇತುವೆಯ ಮೂಲಕವೇ ಹಾದುಹೋಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾತ್ಕಾಲಿಕವಾಗಿ ಈ ಸೇತುವೆಯನ್ನು ಮರುಸ್ಥಾಪಿಸಿ, ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜನಿಯರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ಅಮೀನ್ ಮುಕ್ತಾರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಿ.ಎಂ.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.