ಗುರುವಾರ , ಅಕ್ಟೋಬರ್ 22, 2020
21 °C

ಯಾದಗಿರಿ: ಕೋವಿಡ್‌ನಿಂದ ಸ್ಟಾಫ್‌ ನರ್ಸ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸೋಂಕಿಗೆ 32 ವರ್ಷದ ಸ್ಟಾಫ್‌ ನರ್ಸ್‌ ಒಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

ಕಳೆದ 10 ವರ್ಷಗಳಿಂದ ತಾಲ್ಲೂಕಿನ ಕೌಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ದಾದಿಯೊಬ್ಬರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೂಲತಃ ಬೀದರ್‌ ಜಿಲ್ಲೆಯವರು. 

ಕೆಲ ದಿನಗಳ ಹಿಂದೆ ದಂಪತಿಗೆ ಕೋವಿಡ್‌ ದೃಢಪಟ್ಟಿತ್ತು. ನಂತರ ಐದು ದಿನಗಳ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಸೆಪ್ಟೆಂಬರ್ 29ರಂದು ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಾವನ್ನಪ್ಪಿದ್ದಾರೆ.

ಸ್ಟಾಫ್‌ ನರ್ಸ್‌ ಸಾವಿಗೆ ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಹಾಗೂ ಸೌಲಭ್ಯಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದರೊಂದಿಗೆ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ.

159 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 159 ಮಂದಿಗೆ ಸೋಂಕು ತಗುಲಿದ್ದು ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,589 ಮುಟ್ಟಿದೆ.

ಅದೇ ರೀತಿ 34 ಮಂದಿ ಗುಣಮುಖರಾಗಿದ್ದು, 7688 ಮಂದಿ ಗುಣಮುಖರಾದಂತೆ ಆಗಿದೆ. 848 ಸಕ್ರಿಯ ಪ್ರಕರಣಗಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು