ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿಯಲ್ಲಿ ಸರಳ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಧ್ವಜಾರೋಹಣ: ಡಾ.ರಾಗಪ್ರಿಯಾ
Last Updated 18 ಜನವರಿ 2021, 2:37 IST
ಅಕ್ಷರ ಗಾತ್ರ

ಯಾದಗಿರಿ: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಜ.26 ರ ಬೆಳಿಗ್ಗೆ 7ರಿಂದ 8 ಗಂಟೆಗೆ ತಮ್ಮ ಸರ್ಕಾರಿ ಕಚೇರಿಗಳಲ್ಲಿ ದ್ವಜಾರೋಹಣ ನೆರವೇರಿಸಿ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಸರ್ಕಾರಿ ಅಧಿಕಾರಿಗಳು ಆಗಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಸ್ಕ್ ಸೇರಿದಂತೆ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದರು.

ಈ ಬಾರಿಯ ಆಚರಣೆಯಲ್ಲಿ ಕೊರೊನಾ ಸಂದರ್ಭದಲ್ಲಿ ಸೇವೆ ಸಲ್ಲಿಸಿದ 5 ಜನ ಆರೋಗ್ಯ ಇಲಾಖೆಯವರು ಸೇರಿದಂತೆ ಕೊರೊನಾ ಸೇನಾನಿಗಳಿಗೆ ವಿಶೇಷವಾಗಿ ಸನ್ಮಾನಿಸಲಾಗುವುದು. ಜಿಲ್ಲೆಯ ಕಲಾವಿದರು, ಸಾಹಿತಿಗಳು ಸೇರಿದಂತೆ ಗಣನೀಯವಾಗಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆ ಹಾಡಲು ಕಲಾತಂಡಗಳನ್ನು ನಿಯೋಜಿಸಲು, ಕಾರ್ಯಕ್ರಮದ ವೇದಿಕೆ ಸಿದ್ದಪಡಿಸುವುದು, ಮೈದಾನ ಸಮತಟ್ಟಾಗಿ ಮಾಡುವುದು, ಶಿಷ್ಟಾಚಾರ ಪಾಲಿಸುವುದು, ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೋಟ್ರೇಶ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯ ಮುಖಂಡರು ಇದ್ದರು.

***

ಆಚರಣೆ ಬೇಕಾದ ಸಕಲ ಸಿದ್ಧತೆಗಳನ್ನು ವಹಿಸಿಕೊಂಡು ಆಯಾ ಇಲಾಖೆಗಳು ಯಾವುದೇ ಲೋಪದೋಷಗಳಾಗದಂತೆ ನೋಡಿಕೊಂಡು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು.
-ಡಾ.ರಾಗಪ್ರಿಯಾ ಆರ್,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT