ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
Last Updated 22 ಏಪ್ರಿಲ್ 2022, 16:27 IST
ಅಕ್ಷರ ಗಾತ್ರ

ಯಾದಗಿರಿ: ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವಿಶೇಷ ಕಾರ್ಯಕ್ರಮವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯ ಯಾದಗಿರಿ ತಾಲ್ಲೂಕಿನ 4, ಶಹಾಪುರ 13, ಸುರಪುರ 8, ಗುರುಮಠಕಲ್ 6, ವಡಗೇರಾ 8, ಹುಣಸಗಿ 16 ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ಒಟ್ಟು 55 ಸಾಂಪ್ರದಾಯಿಕ ರುದ್ರಭೂಮಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಪ್ರಗತಿ ವರದಿಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು.

ಏಪ್ರಿಲ್ ತಿಂಗಳಲ್ಲಿ ಯಾದಗಿರಿ ತಾಲ್ಲೂಕು 2, ಗುರುಮಠಕಲ್ 5 ಒಟ್ಟು 7 ಗ್ರಾಮಗಳ ಸ್ಮಶಾನ ಜಮೀನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರ್‌ಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್‌ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ತಿಳಿಸಿದರು.

ತ್ರೀ ಆ್ಯಂಡ್ ನೈನ್ ಮಿಸ್ ಮ್ಯಾಚ್, ಪೈಕಿ ಪಹಣಿ, ಮೋಜನಿ ಕಡತಗಳು, ನವೋದಯ ಆ್ಯಪ್ ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಹಾಗೂ ಸಕಾಲ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದರು. ಸಕಾಲ ಅಡಿ ನೋಂದಾಯಿತ ಸೇವೆಗಳನ್ನು ಆದ್ಯತೆಯಲ್ಲಿ ಒದಗಿಸಿ ಪ್ರಗತಿ ಕುಂಠಿತವಾಗದಂತೆ ಸಾಧಿಸಬೇಕು ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್‌ ಮಧುರಾಜ್, ಸುರಪುರ ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ವಡಗೇರಾ ತಹಶೀಲ್ದಾರ್‌ ಸುರೇಶ್ ಅಂಕಲಗಿ, ಗುರುಮಠಕಲ್ ತಹಶೀಲ್ದಾರ್‌ ಶರಣಬಸವ, ಹುಣಸಗಿ ತಹಶೀಲ್ದಾರ್‌ ಅಶೋಕ ಸುರಪುರಕರ್ ಹಾಗೂ ಇನ್ನಿತರ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT