ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಭಾವಿ: ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಿಸಲು ಆಗ್ರಹ

Last Updated 26 ನವೆಂಬರ್ 2022, 4:26 IST
ಅಕ್ಷರ ಗಾತ್ರ

ಕೆಂಭಾವಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯ ಒದಗಿಸುವಂತೆ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ಆಗ್ರಹಿಸಿದೆ.

ಬುಧವಾರ ಉಪ ತಹಶೀಲ್ದಾರ್ ಮಲ್ಲಿಕಾರ್ಜು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ವೇದಿಕೆ ಮುಖಂಡರುಗಳು, ಸಮುದಾಯ ಆರೋಗ್ಯ ಕೇಂದ್ರವೆಂದು ಮೇಲ್ದರ್ಜೆಗೇರಿ 8 ವರ್ಷ ಕಳೆದರೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಗಬೇಕಾದ ಸೌಲಭ್ಯಗಳು ಮಾತ್ರ ದೊರೆಯುತ್ತಿವೆ. ಈ ಕುರಿತು ಹಲವು ಸಲ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ಪಟ್ಟಣದಲ್ಲಿ ನಿತ್ಯ 300 ರಿಂದ 400 ಹೊರ ರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಸೌಲಭ್ಯ ಮಾತ್ರ ಮರೀಚಿಕೆಯಾಗಿವೆ. ಕೂಡಲೇ ಇಲ್ಲಿ ಸಿಬ್ಬಂದಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಸಿಬೇಕು, ನಿರ್ಲಕ್ಷ ವಹಿಸಿದರೆ ಮುಂಬರುವ ದಿನಗಳಲ್ಲಿ ಹೋರಾಟ ಮಾಡುವುದು ಎಂದು ಎಚ್ಚರಿಸಿದರು.

ಅಧ್ಯಕ್ಷ ಬಂದೇನವಾಜ್ ನಾಲತ್ತವಾರ್, ಲಕ್ಷ್ಮಣ ಬಸರಿಗಿಡ, ರಜಾಕ್ ಸಾಸನೂರ್, ಸದ್ದಾಂ ಪಟ್ಟೇದಾರ್, ಚೆನ್ನಯ್ಯ ಖಾನಾಪೂರ, ಶಂಕ್ರಪ್ಪ ದೊಡಮನಿ, ಹುಸೇನ್ ಕೆಂಭಾವಿ, ಸಂಗಪ್ಪ ಒಡೆಯರ, ಭೀಮರಾಯ, ತಿರುಪತಿ ಬೇಲೂರ, ಹಮೀದ, ಶಬ್ಬೀರ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT