ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಎಸ್‍ಐ ಪರಶುರಾಮ ಸಾವು: ತನಿಖೆ ಮಾಡಿಸಿ- ಅದಪ್ಪ ಹೊಸಮನಿ  

Published 4 ಆಗಸ್ಟ್ 2024, 15:43 IST
Last Updated 4 ಆಗಸ್ಟ್ 2024, 15:43 IST
ಅಕ್ಷರ ಗಾತ್ರ

ಸುರಪುರ: ‘ಯಾದಗಿರಿ ನಗರ ಠಾಣಾ ಪಿಎಸ್‍ಐ ಪರಶುರಾಮ ಅವರ ಸಾವು ಕುರಿತು ಸೂಕ್ತ ತನಿಖೆ ಮಾಡಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಬೇಕು’ ಎಂದು ಭಾರತೀಯ ದಲಿತ ಪ್ಯಾಂಥರ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಅದಪ್ಪ ಹೊಸಮನಿ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ಠಾಣೆಯಲ್ಲಿ ಮುಂದುವರಿಯಲು ಸ್ಥಳೀಯ ಜನಪ್ರತಿನಿಧಿಗಳು ಪಿಎಸ್‍ಐ ಪರಶುರಾಮಗೆ ₹30 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದು ನೋಡಿದರೆ ಬೇಲಿ ಎದ್ದು ಹೊಲ ಮೇಯ್ದಂತೆ ಕಾಣುತ್ತದೆ.

ಪಿಎಸ್‍ಐ ಪರಶುರಾಮ ಸಾವಿನ ಸೂಕ್ತ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಅವರ ಪತ್ನಿಗೆ ಪಿಎಸ್‍ಐ ಸ್ಥಾನಮಾನದ ನೌಕರಿ ಕೊಡಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT