ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

dnp ಯಾದಗಿರಿ: ವಜಾ ಮಾಡಿದ ನೌಕರರ ಮರುನೇಮಕಕ್ಕೆ ಆಗ್ರಹ

ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಯೂನಿಯನ್‌ ಪ್ರತಿಭಟನೆ
Last Updated 25 ಜನವರಿ 2023, 6:00 IST
ಅಕ್ಷರ ಗಾತ್ರ

ಯಾದಗಿರಿ: ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೆ, ಮರುನೇಮಕ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಯೂನಿಯನ್‌ (ಎಐಟಿಯುಸಿ) ವಿಭಾಗದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಹಳೆ ಬಸ್‌ ನಿಲ್ದಾಣದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಿದ ಯೂನಿಯನ್‌ ಪದಾಧಿಕಾರಿಗಳು ಶೀಘ್ರ ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಾರಿಗೆ ನಿಗಮಗಳ ಆಡಳಿತ ಮಂಡಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸಲು ಬೇಡಿಕೆಗಳ ಪ್ರಣಾಳಿಕೆ ಸಲ್ಲಿಸಿ, ಈ ಬೇಡಿಕೆಗಳ ಕುರಿತು ಸಂಪೂರ್ಣವಾಗಿ ವಿವರಿಸಲಾಗಿದೆ. ಆದರೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು
ಆಪಾದಿಸಿದರು.

ಈಗಾಗಲೇ ಸಾರಿಗೆ ನೌಕರರ ವೇತನ ಹೆಚ್ಚಳದ ವಿಷಯ ಸುಮಾರು 3 ತಿಂಗಳು ವಿಳಂಬವಾಗಿದೆ. ಇದರಿಂದ ಸಾರಿಗೆ ನೌಕರರಲ್ಲಿ ಸಾಕಷ್ಟು ಆಶಾಂತಿ, ಆಕ್ರೋಶ ಮೂಡಿದೆ. ಅದೇನೇ ಇರಲಿ ಇಂದು ಬೆಲೆ ಏರಿಕೆ ಮತ್ತಿತರ ಕಾರಣಗಳಿಂದಾಗಿ ಸಾರಿಗೆ ನಿಗಮಗಳ ನೌಕರರು ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದರು.
ಮೂಲ ವೇತನಕ್ಕೆ ಬಿಡಿಎ ವಿಲೀನಗೊಳಿಸಿ, ಪರಿಷ್ಕೃತ ಮೂಲ ವೇತನದ ಶೇ 25ರಷ್ಟನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸತಕ್ಕದ್ದು ಎಂದು ಒತ್ತಾಯಿಸಿದರು.

ಬಸ್‌ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ.

ಈ ವೇಳೆ ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಯೂನಿಯನ್‌ (ಎಐಟಿಯುಸಿ) ಮಹಾದೇವಪ್ಪ, ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ರವೀಂದ್ರರೆಡ್ಡಿ, ಎಸ್‌ಆರ್‌ಟಿಸಿ ಎಸ್‌ಸಿ, ಎಸ್ಟಿ ಎಂಪ್ಲಾಯಿಸ್‌ ಯೂನಿಯನ್‌ ಭೀಮರಾಯ ರಾಕಂಗೇರಾ ಸೇರಿದಂತೆ ಸಿಬ್ಬಂದಿ, ಪದಾಧಿಕಾರಿಗಳು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT