ವಡಗೇರಾ: ರಾಜ್ಯ ವಿಧಾನ ಪರಿಷತ್ನಲ್ಲಿ ಖಾಲಿ ಇರುವ ಸ್ಥಾನವನ್ನುಕುರುಬ ಸಮಾಜದ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ವಿಶ್ವನಾಥ ನೀಲಹಳ್ಳಿಗೆ ನೀಡಬೇಕು ಎಂದು ಜಿ.ಪಂ ಮಾಜಿ ಸದಸ್ಯ ಹಾಗೂ ಕುರುಬ ಸಮಾಜದ ಹಿರಿಯ ಮುಖಂಡ ಸಿದ್ದಣ್ಣಗೌಡ ಕಾಡಂನೋರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಗುರುಮಠಕಲ್ ಮತಕ್ಷೇತ್ರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷ ಬೆಳೆಸಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿಯನ್ನು ಚಾಚು ತಪ್ಪದೇ ನಿರ್ವಹಿಸಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರಣ ಕರ್ತರಾಗಿದ್ದಾರೆ ಎಂದು ಹೇಳಿದರು.

ಹಲವಾರು ವರ್ಷಗಳಿಂದ ಕುರುಬ ಸಮಾಜಕ್ಕೆಕಾಂಗ್ರೆಸ್ ಪಕ್ಷದಿಂದ ಯಾವುದೇ ಸ್ಥಾನ ಸಿಕ್ಕಿಲ್ಲ. ಹಾಗಾಗಿ ಈಗ ನಡೆಯವ ವಿಧಾನ ಪರಿಷತ್ ಸ್ಥಾನದ ಆಯ್ಕೆಯಲ್ಲಿಕುರುಬ ಸಮುದಾಯದ ವಿಶ್ವನಾಥ ನೀಲಹಳ್ಳಿಯವರನ್ನು ಆಯ್ಕೆ ಮಾಡಿದರೆ ಕುರುಬ ಸಮುದಾಯಕ್ಕೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಅವರು ತಿಳಿಸಿದರು.

ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಸ್ಪಂದಿಸದ್ದಿರೆ ಕುರುಬ ಸಮಾಜದ ವತಿಯಿಂದ ಜಿಲ್ಲೆಯಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.