ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಭಾವಿ: ಮದ್ಯ ಅಕ್ರಮ ಮಾರಾಟ ತಡೆಯಲು ಆಗ್ರಹ

Published 11 ಆಗಸ್ಟ್ 2024, 16:20 IST
Last Updated 11 ಆಗಸ್ಟ್ 2024, 16:20 IST
ಅಕ್ಷರ ಗಾತ್ರ

ಕೆಂಭಾವಿ: ಪಟ್ಟಣ ಸಮೀಪದ ನಗನೂರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಇಸ್ಪೀಟ್, ಮಟಕಾ ಸೇರಿದಂತೆ ಎಲ್ಲ ಅಕ್ರಮ ಚಟುವಟಿಕೆಗಳನ್ನು ನಿಷೇಧ ಮಾಡಬೇಕು’ ಒತ್ತಾಯಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹಾಗೂ ಗ್ರಾಮದ ಮಹಿಳೆಯರು ಪೊಲೀಸ್‌ ಠಾಣೆಗೆ ಭೇಟಿ ಪಿಎಸ್‌ಐ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಮಾತನಾಡಿ,‘ನಗನೂರ ಗ್ರಾಮದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು, ಗಲ್ಲಿಗಲ್ಲಿಗಳ ಕಿರಾಣಿ ಅಂಗಡಿ, ಪಾನ್‌ಶಾಪ್‌ಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ಮಟ್ಕಾ, ಇಸ್ಪೀಟ್ ಆಡುವುದು ಕೂಡ ಹೆಚ್ಚಾಗಿದೆ. ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ’ ಎಂದರು.

‘ಹಲವು ಬಾರಿ ಪೊಲೀಸ್ ಇಲಾಖೆ ಸಿಬ್ಬಂದಿಗೆ ಹೇಳಿದರೂ ಗಮನ ವಹಿಸಿದರಿಂದ ಪಿಎಸ್‍ಐ ಬಳಿಗೆ ಬರುವಂತಾಗಿದೆ. ನಮಗೆ ಕಾನೂನಿನ ಮೂಲಕ ನ್ಯಾಯ ದೊರಕಿಸಿಕೊಡಬೇಕು. ನಗನೂರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ತಡೆಹಿಡಿಯಬೇಕು’ ಎಂದು ಒತ್ತಾಯಿಸಿದ್ದಾರೆ.

ಸುರಪುರ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತ್ರಾಯಗೌಡ ಪರಸನಹಳ್ಳಿ, ಕಾರ್ಯದರ್ಶಿ ಶಿವಶಂಕರರೆಡ್ಡಿ ನಗನೂರ, ಬಂದೇನವಾಜ ಯಾಳಗಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT