ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ

Last Updated 16 ಫೆಬ್ರುವರಿ 2021, 3:12 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸೋಮವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ ಕೆಲ ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿದ್ದರು.

ನಂತರ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಸುರಕ್ಷಿತವಾಗಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ. ಲಸಿಕೆ ಪಡೆಯಲು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ವಿದೇಶಗಳಿಂದಲೂ ಭಾರತ ಸಿದ್ಧಪಡಿಸಿದ ಲಸಿಕೆಗಾಗಿ ಬೇಡಿಕೆ ಇದೆ ಎಂದರು.

ನಮ್ಮ ದೇಶದಲ್ಲಿಯೇ ಅಭಿವೃದ್ಧಿಪಡಿಸಿದ ಲಸಿಕೆ ಇದಾಗಿದ್ದು, ಎಲ್ಲಾ ಅಧಿಕಾರಿ, ಸಿಬ್ಬಂದಿ ಯಾವುದೇ ಭಯವಿಲ್ಲದೆ ಪಡೆಯುವಂತೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಸೇರಿದಂತೆ ಒಟ್ಟು 25 ಸಾವಿರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ. ಎಲ್ಲರಿಗೂ ನೀಡಲು ಸ್ವಲ್ಪ ಕಾಲ ಕಾಯಬೇಕಾಗಬಹುದು, ಅಲ್ಲಿಯವರೆಗೂ ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್, ಆರ್.ಸಿ.ಎಚ್. ಡಾ.ಸೂರ್ಯಪ್ರಕಾಶ ಕಂದಕೂರು, ಆರ್.ಎಮ್.ಒ ಡಾ.ನೀಲಮ್ಮ, ಕೋವಿಡ್ ನೋಡಲ್ ಅಧಿಕಾರಿ ಡಾ.ಸುನೀಲಕುಮಾರ ಪಾಟೀಲ್, ಡಾ.ಪ್ರೇಮ, ಸಾವಿತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT