ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜು ಅರಸು ಭೂ ಸುಧಾರಣೆ ಕಾಯ್ದೆ ರೂವಾರಿ

ಜಿಲ್ಲಾಡಳಿತ ವತಿಯಿಂದ ಡಿ.ದೇವರಾಜ ಅರಸು 105ನೇ ಜನ್ಮದಿನ
Last Updated 20 ಆಗಸ್ಟ್ 2020, 16:08 IST
ಅಕ್ಷರ ಗಾತ್ರ

ಯಾದಗಿರಿ: ‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿಗಳಾಗಿದ್ದಾರೆ. ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಭೂಸುಧಾರಣಾ ಕಾಯ್ದೆ ಜಾರಿಗೆ ತರುವ ಮೂಲಕ ಉಳುವವನೇ ಭೂ ಒಡೆಯನನ್ನಾಗಿ ಮಾಡಿದರು’ ಎಂದು ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಎಸ್ ಸೋಮನಾಳ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು 105ನೇ ಜಯಂತಿಯಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

‘ಹಿಂದಿನ ದಿನಗಳಲ್ಲಿ ಜಾರಿಯಲ್ಲಿದ್ದ ಜಮೀನ್ದಾರಿಕೆ ಪದ್ಧತಿ ಹೊಗಲಾಡಿಸಲು ಭೂಸುಧಾರಣಾ ಕಾಯ್ದೆ ಜಾರಿಗೊಳಿಸಿದರು. ಅರಸು ಅವರು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ದೀನ ದಲಿತರು, ಬಡವರು, ಶೋಷಿತರು, ಹಿಂದುಳಿದವರು ಸೇರಿದಂತೆ ಪ್ರತಿಯೊಬ್ಬರ ಏಳಿಗೆ ಹಾಗೂ ಸಮಾನತೆಗಾಗಿ ಶ್ರಮಿಸಿದ ಅರಸು ಅವರ ಸೇವೆ ಸ್ಮರಣೀಯ. ಹೀಗಾಗಿ ಇಂಥ ಮಹಾನ್ ವ್ಯಕ್ತಿಯ ಆದರ್ಶ ತತ್ವಗಳನ್ನು ನಮ್ಮ ಜೀವನದಲ್ಲಿ ದಿನ ನಿತ್ಯ ಪಾಲನೆ ಮಾಡುವುದು ಅಗತ್ಯ’ ಎಂದು ತಿಳಿಸಿದರು.

ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಸತಿನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಸ್ಸೆಸ್ಸೆಲ್ಸಿ: ಸುರಪುರ ತಾಲ್ಲೂಕಿನ ಹೆಗ್ಗಣ್ಣದೊಡ್ಡಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ಕೃಷ್ಣಾ 625ಕ್ಕೆ 607, ಶಹಾಪುರ ತಾಲ್ಲೂಕಿನ ಬೆಂಡಬೆಂಬಳಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ಅನಿಲ 625ಕ್ಕೆ 58, ಶಹಾಪುರ ತಾಲ್ಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಅಕ್ಷತಾ 625ಕ್ಕೆ 538, ಹುಣಸಗಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ವಿಜಯಲಕ್ಷ್ಮಿ 625ಕ್ಕೆ 550 ಅಂಕಗಳನ್ನು ಪಡೆದಿದ್ದಾರೆ.

ದ್ವಿತೀಯ ಪಿಯುಸಿ: ಗುರುಮಠಕಲ್ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ರಮೇಶ 600ಕ್ಕೆ 562, ಶಹಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ಗೌಸ್ ಭಾಷಾ 600ಕ್ಕೆ 555, ಶಹಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಾದ ನಿಂಗಮ್ಮ 600ಕ್ಕೆ 572 ಹಾಗೂ ಮಾಳಮ್ಮ 600ಕ್ಕೆ 538 ಅಂಕಗಳನ್ನು ಪಡೆದಿದ್ದಾರೆ.

ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಭು ದೊರೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿ ಅಧೀಕ್ಷಕ ಸಾಬಯ್ಯ, ವಸತಿ ನಿಲಯಗಳ ಮೇಲ್ವಿಚಾರಕ ಲಕ್ಷ್ಮಿ, ಮಲ್ಲಮ್ಮ, ಬಸಲಿಂಗಮ್ಮ ಹಾಗೂ ಮಂಜುಳಾ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

***

ಡಿ.ದೇವರಾಜ ಅರಸು ಅವರುಶೋಷಿತರ ಸಮಗ್ರ ಅಭಿವೃದ್ಧಿಯ ಹರಿಕಾರ, ನೊಂದವರ ನಂದಾದೀಪ, ಧೀಮಂತ ನಾಯಕರಾಗಿದ್ದಾರೆ
– ಶಂಕರಗೌಡ ಎಸ್ ಸೋಮನಾಳ,ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT