ಮಂಗಳವಾರ, ಆಗಸ್ಟ್ 3, 2021
24 °C

ಅಭಿವೃದ್ದಿಗೆ ಒತ್ತು: ಶಾಸಕ ಮುದ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿದ ಯಾದಗಿರಿ ತಾಲ್ಲೂಕಿನ ‘ಮೈಲಾಪುರ ಮಲ್ಲಯ್ಯ’ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ಬುಧವಾರ ತಾಲ್ಲೂಕಿನ ಮೈಲಾಪುರದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಲೊಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದ ಯಾತ್ರಿ ನಿವಾಸ ಹಾಗೂ ರಸ್ತೆ, ಚರಂಡಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾವು ಮೊದಲು ಇಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ರಾಚನಗೌಡ ಮುದ್ನಾಳ, ಜಿಪಂ ಸದಸ್ಯ ಅಮರದೀಪ್ ನಾಯಕ್, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಎಇಇ ವಿಶ್ವನಾಥರಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.