ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ: ಋಷಿಕೇಶ ಭಗವಾನ ಸೋನವಣೆ

Last Updated 24 ಡಿಸೆಂಬರ್ 2019, 11:07 IST
ಅಕ್ಷರ ಗಾತ್ರ

ಯಾದಗಿರಿ: ‘ಸ್ಪರ್ಧಾತ್ಮಕ ಯುಗದಲ್ಲಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ದೈನಂದಿನ ಪಠ್ಯಪುಸ್ತಕಗಳ ಬೋಧನೆ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ಸಂಗೀತ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಯೋಗದತ್ತ ಆಸಕ್ತಿ ಮೂಡಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ ಹೇಳಿದರು.

ನಗರ ಹೊರವಲಯದ ಆರ್ಯಭಟ್ಟ ಅಕಾಡೆಮಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ 3ನೇ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಭಾಗವಹಿಸಬೇಕು. ಕ್ರೀಡೆಯಿಂದ ಮಕ್ಕಳಲ್ಲಿ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ’ ಎಂದರು.

‘ಪಾಲಕರು ತಮ್ಮ ಮಕ್ಕಳ ಅಭ್ಯಾಸ ಹಾಗೂ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಜೊತೆಗೆ ಸಕಾಲಕ್ಕೆ ಸಲಹೆ ಸೂಚನೆ ನೀಡಬೇಕು. ಅಂದಾಗ ಮಾತ್ರ ಅವರು ಒಳ್ಳೆಯ ಪ್ರಜೆಯಾಗಿ ಯಶಸ್ವಿ ಜೀವನ ನಡೆಸಲು ಸಹಕಾರಿಯಾಗುತ್ತದೆ’ ಎಂದರು.

ಅಕಾಡೆಮಿ ಅಧ್ಯಕ್ಷ ಸುಧಾಕರ ರೆಡ್ಡಿ ಪಾಟೀಲ ಮಾತನಾಡಿದರು. ವೆಂಕಟರೆಡ್ಡಿ ಮಾಲಿಪಾಟೀಲ, ಪ್ರಾಶುಪಾಲ ಅರವಿಂದಾಕ್ಷಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT