ಬುಧವಾರ, ಜೂನ್ 23, 2021
24 °C
ಡಿಎಚ್‌ಒ ಮನೆಯಿಂದ ₹10.62 ಲಕ್ಷ ಹಣ, ಚಿನ್ನಾಭರಣ ವಶ

ಎಸಿಬಿ ಬಲೆಗೆ ಡಿಎಚ್‌ಒ ಡಾ.ಎಂ.ಎಸ್‌.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾ.ಎಂ.ಎಸ್‌.ಪಾಟೀಲ, ಡಿಎಚ್‌ಒ

ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ಹಾಗೂ ಜಿಲ್ಲಾ ಕುಟುಂಬ ಯೋಜನಾಧಿಕಾರಿ ಸಿದ್ದನಗೌಡ ಬಸನಗೌಡ ಪಾಟೀಲ ಎಸಿಬಿ ಬಲೆಗೆ ಬಿದ್ದಿದ್ದಾರೆ. 

‘ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನರ್ಸ್‌ ಹುದ್ದೆಗೆ ನೇಮಕ ಮಾಡಿಕೊಳ್ಳಲು ಮಂಗಳವಾರ ಇವರು ತಮ್ಮ ಕಚೇರಿಯಲ್ಲಿ ₹25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಲಾಗಿದೆ’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

₹10.62 ಲಕ್ಷ ಹಣ, ಚಿನ್ನಾಭರಣ ವಶ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ಸರ್ಕಾರಿ ವಸತಿ ಗೃಹದ ಮನೆಯಿಂದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ₹10.62 ಲಕ್ಷ ಹಣ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿವರೆಗೆ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು