ಭಾನುವಾರ, ಮೇ 16, 2021
22 °C
ಚಿತ್ತಾಪುರ ರಸ್ತೆಯಲ್ಲಿ ಆಸ್ತಿ ತೆರಿಗೆ ನೂತನ ಕೌಂಟರ್ ಉದ್ಘಾಟಿಸಿದ ಮುದ್ನಾಳ

‘ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: 2021–22ನೇ ಸಾಲಿನ ಆಸ್ತಿ ತೆರಿಗೆಯನ್ನು ನಗರಸಭೆಗೆ ಸಾರ್ವಜನಿಕರು ಏ.30ರ ಒಳಗಾಗಿ ಪಾವತಿ ಮಾಡಿದರೆ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಸಾರ್ವಜನಿಕರು ನಿಗದಿತ ಸಮಯದಲ್ಲಿ ಆಸ್ತಿ ತೆರಿಗೆ ಪಾವತಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ಚಿತ್ತಾಪುರ ರಸ್ತೆಯಲ್ಲಿರುವ ನಗರಸಭೆ ಮಳಿಗೆಯಲ್ಲಿ ಶುಕ್ರವಾರ ಹೊಸದಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಆಸ್ತಿ ತೆರಿಗೆ ನೂತನ ಕೌಂಟರ್ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಬಾಕಿ ಉಳಿಸಿಕೊಂಡ ತೆರಿಗೆದಾರರಿಗೆ ಇದು ಒಂದು ಸಂತಸದ ಸಂಗತಿ. ಎಲ್ಲಾ ಸಾರ್ವಜನಿಕರು ನಿಗದಿತ ಸಮಯದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವ ಮೂಲಕ ನಗರಸಭೆಯ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಇನ್ನು ಹೆಚ್ಚಾಗಿ ನಡೆಸಲು ಸಹಕರಿಸಬೇಕು ಎಂದರು.

ನಗರಸಭೆ ಪೌರಾಯುಕ್ತ ಭೀಮಣ್ಣ ನಾಯಕ ಮಾತನಾಡಿ, ಆಸ್ತಿ ತರಿಗೆದಾರರು ನಿಗದಿತ ಅವಧಿಯಲ್ಲಿ ಪಾವತಿಸಿ ರಿಯಾಯಿತಿ ಸೌಲಭ್ಯ ಪಡೆಯಲು ಹಾಗೂ ಆಸ್ತಿ ತೆರಿಗೆ ಬಾಕಿ, ನೀರಿನ ತೆರಿಗೆ ಬಾಕಿ, ಉದ್ಯಮಿ ಪರವಾನಗಿ ಶುಲ್ಕ, ಮಳಿಗೆ ಬಾಡಿಗೆ ಹಾಗೂ ಬಾಕಿ ಪಾವತಿಸುವುದರ ಮೂಲಕ ಮತ್ತು ಉದ್ದಿಮೆ ಪರವಾನಗಿಯನ್ನು ನವೀಕರಿಸುವ ಮೂಲಕ ನಗರದ ಮೂಲಭೂತ ಸೌಲಭ್ಯ ಒದಗಿಸಲು ಮತ್ತು ನಗರದ ಅಭಿವೃದ್ಧಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಮುಂಚೆ ನಗರಸಭೆಯಲ್ಲಿದ್ದ ತೆರಿಗೆ ಪಾವತಿ ಕೇಂದ್ರ ಮುಂಚೂಣಿಯಲಿದ್ದು, ಇತರರ ಅನುಕೂಲಕ್ಕಾಗಿ ಹೊಸದಾಗಿ ಚಿತ್ತಾಪುರ ರಸ್ತೆಯ ನಗರಸಭೆ ಸಂಕೀರ್ಣದಲ್ಲಿ ಆರಂಭಿಸಲಾಗಿದೆ. ಕಾರಣ ಎಲ್ಲ ಆಸ್ತಿ ತೆರಿಗೆದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ಯುಡಾ ಸದಸ್ಯ ಮಂಜುನಾಥ ಜಡಿ, ಚಂದ್ರಕಾಂತ ಮಡ್ಡಿ, ಕಂದಾಯ ಅಧಿಕಾರಿ ಅಲ್ಕೆಝಂಡರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.