ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ತವ್ಯಕ್ಕೆ ಹಾಜರಾಗದಿದ್ದರೆ ಸೇವೆಯಿಂದ ವಜಾ

Published 14 ಜೂನ್ 2024, 16:26 IST
Last Updated 14 ಜೂನ್ 2024, 16:26 IST
ಅಕ್ಷರ ಗಾತ್ರ

ಯಾದಗಿರಿ: ಸುರಪುರ ತಾಲ್ಲೂಕಿನ ಜೋಗುಂಡಭಾವಿ ಪ್ರೌಢಶಾಲೆಯ ಸೇವಕ(ಡಿ ಗ್ರೂಪ್) ಸಿಬ್ಬಂದಿ ಮಹಮ್ಮದ್ ಇಸ್ಮಾಯಿಲ್ ಅನಧಿಕೃತವಾಗಿ ಗೈರಾಗಿದ್ದು ಪುನಃ ಕರ್ತವ್ಯಕ್ಕೆ ಹಾಜರಾಗದಿದ್ದರೆ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಡಿಡಿಪಿಐ ಮಂಜುನಾಥ ಎಚ್.ಟಿ. ತಿಳಿಸಿದ್ದಾರೆ.

2023ರ ಏಪ್ರಿಲ್‌ 12ರಿಂದ ಇಂದಿನವರೆಗೂ ಶಾಲಾ ಕರ್ತವ್ಯಕ್ಕೆ ಗೈರಾದ್ದಾರೆ. ಈಗಾಗಲೇ ಕಚೇರಿಯಿಂದ ಮೂರು ಬಾರಿ ನೋಟಿಸ್ ನೀಡಿದ್ದರೂ ಕರ್ತವ್ಯಕ್ಕೆ ಹಾಜರಾಗಿಲ್ಲ. ಬೇಜವಾಬ್ದಾರಿತನ ಮತ್ತು ಕರ್ತವ್ಯ ನಿರ್ಲಕ್ಷತನ ಮಾಡಿದ್ದು, ಇನ್ನೂ 15 ದಿನಗಳೊಳಗಾಗಿ ಕರ್ತವ್ಯಕ್ಕೆ ಹಾಜರಾಗದಿದ್ದರೆ, ಅವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮ(ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) 1957 ರ ಪ್ರಕಾರ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT